ಕರ್ನಾಟಕ

karnataka

ETV Bharat / state

ದಿಢೀರ್​ ಮೈಮೇಲೆ ನುಗ್ಗಿದ ಹೋರಿ: ಶಾಸಕ ರೇಣುಕಾಚಾರ್ಯ ಸ್ವಲ್ಪದರಲ್ಲೇ ಪಾರು - Renukaacharya latest news

ಹೊನ್ನಾಳಿ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ನಡೆಯುವ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಶಾಸಕ ರೇಣುಕಾಚಾರ್ಯ ಸೇರಿದಂತೆ ಬಿಜೆಪಿಯ ನಾಯಕರು ಪಾಲ್ಗೊಂಡಿದ್ದರು. ಈ ವೇಳೆ ಅನಿರೀಕ್ಷಿತವಾಗಿ ಹೋರಿವೊಂದು ಮೈಮೇಲೆ ನುಗ್ಗಿತ್ತು. ಆಗ ರೇಣುಕಾಚಾರ್ಯ ಸೇರಿ ಹಲವರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹೋರಿ ಬೆದರಿಸುವ ಸ್ಪರ್ಧೆ

By

Published : Nov 1, 2019, 6:07 PM IST

Updated : Nov 1, 2019, 9:00 PM IST

ದಾವಣಗೆರೆ:ಹೋರಿ ಬೆದರಿಸುವ ಸ್ಪರ್ಧೆ ವೇಳೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಸೇರಿದಂತೆ ಇತರರ ಮೇಲೆ ಹೋರಿಯೊಂದು ನುಗ್ಗಿದ ಘಟನೆ ಹೊನ್ನಾಳಿ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ನಡೆದಿದೆ.

ಸ್ಪರ್ಧೆ ವೇಳೆ ಇದ್ದಕ್ಕಿದ್ದಂತೆ ನುಗ್ಗಿದ ಹೋರಿ, ರೇಣುಕಾಚಾರ್ಯ ಸೇರಿ ಹಲವರು ಪ್ರಾಣಾಪಾಯದಿಂದ ಪಾರು...!

ದೀಪಾವಳಿ ಹಬ್ಬದ ಪ್ರಯುಕ್ತ ಹೋರಿ ಬೆದರಿಸುವ ಸ್ಪರ್ಧೆಯನ್ನು ಪ್ರತಿವರ್ಷ ದೊಡ್ಡೇರಿ ಗ್ರಾಮದಲ್ಲಿ ಆಯೋಜಿಸಲಾಗುತ್ತದೆ. ಇದನ್ನು ವೀಕ್ಷಿಸಲು ಸುತ್ತಮುತ್ತಲಿನ ಗ್ರಾಮದ ಜನರು ಆಗಮಿಸುತ್ತಾರೆ. ಈ ಸ್ಪರ್ಧೆ ಅತ್ಯಂತ ವಿಜೃಂಭಣೆಯಿಂದ ನೆರವೇರುತ್ತದೆ. ಈ ವರ್ಷವೂ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಹೊನ್ನಾಳಿ ಶಾಸಕ ರೇಣುಕಾಚಾರ್ಯ ಸೇರಿ ಬಿಜೆಪಿಯ ನಾಯಕರು ಪಾಲ್ಗೊಂಡಿದ್ದರು.

ಈ ವೇಳೆ ದಿಢೀರ್​ನೇ ಹೋರಿವೊಂದು ಮೈಮೇಲೆ ನುಗ್ಗಿದ ಪರಿಣಾಮ ರೇಣುಕಾಚಾರ್ಯ, ದಾವಣಗೆರೆ ಜಿಲ್ಲಾ ಪಂಚಾಯತ್ ಪ್ರಭಾರ ಅಧ್ಯಕ್ಷ ಸುರೇಂದ್ರ ನಾಯ್ಕ್, ಹೊನ್ನಾಳಿ ಬಿಜೆಪಿ ಮಂಡಲದ ಅಧ್ಯಕ್ಷ ಜೆ. ಕೆ. ಸುರೇಶ್, ಶಿವ ಹುಡೇದ್, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಮಂಜುನಾಥ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Last Updated : Nov 1, 2019, 9:00 PM IST

ABOUT THE AUTHOR

...view details