ದಾವಣಗೆರೆ:ನಗರದ ಹೊಂಡಾ ಸರ್ಕಲ್ ಬಳಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಅಕ್ರಮ ಮದ್ಯ ಮಾರಾಟ ಅಡ್ಡೆ ಮೇಲೆ ಪೊಲೀಸರ ದಾಳಿ: ಓರ್ವನ ಬಂಧನ - ದಾವಣಗೆರೆ ನ್ಯೂಸ್
ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಮನೆ ಮೇಲೆ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಅಕ್ರಮ ಮದ್ಯ ಮಾರಾಟ ಅಡ್ಡೆ ಮೇಲೆ ಪೊಲೀಸರ ದಾಳಿ: ಓರ್ವನ ಬಂಧನ
ಈ ವೇಳೆ ಮದ್ಯವನ್ನು ಜಪ್ತಿ ಮಾಡಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಡೋಲಿ ಚಂದ್ರ ಹಾಗೂ ರೂಪಾ ಎಂಬುವರು ಮನೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದರು ಎನ್ನಲಾಗಿದ್ದು, ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಡೋಲಿಚಂದ್ರ ಎಂಬಾತನನ್ನು ಬಂಧಿಸಿದ್ದಾರೆ.
ಈ ಬಗ್ಗೆ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.