ದಾವಣಗೆರೆ : ತಾಲೂಕಿನ ಆಲೂರು ಗ್ರಾಮದ ಬಳಿ ಕಾರ್ಯಾಚರಣೆ ನಡೆಸಿದ ಪೂರ್ವ ವಲಯ ಐಜಿ ಸ್ಕ್ವ್ಯಾಡ್ ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಸ್ಫೋಟಕಗಳನ್ನು ವಶಕ್ಕೆ ಪಡೆದಿದೆ.
ಆಲೂರು ಬಳಿಯ ಕಲ್ಲಿನ ಕ್ವಾರೆಗೆ ಈ ಸ್ಫೋಟಕಗಳನ್ನು ಸಾಗಿಸಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಎರಡು ಬುಲೆರೋ ವಾಹನಗಳಲ್ಲಿ ಸಾಗಿಸುತ್ತಿದ್ದ 2,970 ಜಿಲೆಟಿನ್ ಜೆಲ್ಗಳು ಮತ್ತು 790 ಎಲೆಕ್ಟ್ರಾನಿಕ್ ಡಿಟೋನೇಟರ್ಗಳನ್ನು ವಶಕ್ಕೆ ಪಡೆಯಲಾಗಿದೆ.
ಓದು : ಡೆಂಟಲ್ ವಿದ್ಯಾರ್ಥಿನಿಯನ್ನು ಗುಂಡಿಕ್ಕಿ ಕೊಂದು ಯುವಕ ಆತ್ಮಹತ್ಯೆಗೆ ಶರಣು..!
ಬಾಗಲಕೋಟೆಯಿಂದ ದಾವಣಗೆರೆಗೆ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಅಕ್ರಮವಾಗಿ ಅಪಾರ ಪ್ರಮಾಣದ ಸ್ಫೋಟಕ ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಐಜಿ ಸ್ಕ್ವ್ಯಾಡ್ನ ಡಿವೈಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಸಾಗಿಸುತ್ತಿದ್ದ ಸ್ಫೋಟಕಗಳು, ಎರಡು ವಾಹನ ಮತ್ತು ಇಬ್ಬರು ಚಾಲಕರನ್ನು ವಶಕ್ಕೆ ಪಡೆದಿದ್ದಾರೆ.
ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.