ದಾವಣಗೆರೆ:ಜಿಲ್ಲೆಯಲ್ಲಿ ಕೋವಿಡ್-19 ರೋಗವು ಹತೋಟಿಗೆ ಬರುವವರೆಗೂ ಪಾನ್ ಮಸಾಲ, ತಂಬಾಕು ಹಾಗೂ ಅದರ ಉತ್ಪನ್ನಗಳನ್ನು ಅಂಗಡಿಗಳಲ್ಲಿ ಮಾರಾಟ ಮತ್ತು ಬಳಕೆ ಮಾಡುವುದು ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ದಾವಣಗೆರೆ ನಗರದಲ್ಲಿ ತಂಬಾಕು ನಿಯಂತ್ರಣ ಕೋಶ ಮತ್ತು ಮಹಾನಗರ ಪಾಲಿಕೆಯ ವತಿಯಿಂದ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ಮಾಡಿ ತಂಬಾಕು ಹಾಗೂ ಅದರ ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗಿದೆ.
ದಾವಣಗೆರೆಯಲ್ಲಿ ತಂಬಾಕು ಉತ್ಪನ್ನ ಮಾರಾಟ: ಪಾಲಿಕೆಯಿಂದ ಅಂಗಡಿ ಮೇಲೆ ದಾಳಿ - corona news
ಕೊರೊನಾ ಭೀತಿ ಹಿನ್ನೆಲೆ ದಾವಣಗೆರೆ ಜಿಲ್ಲಾದ್ಯಂತ ತಂಬಾಕು, ಪಾನ್ ಮಸಾಲ ಸೇರಿದಂತೆ ಅದರ ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ತಾತ್ಕಾಲಿಕವಾಗಿ ನಿಷೇಧ ಮಾಡಲಾಗಿದೆ. ಈ ಆದೇಶದ ನಡುವೆಯೂ ಕೆಲವು ಕಡೆ ಅಕ್ರಮವಾಗಿ ಮಾರಾಟ ಮಾಡಿರುವುದು ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ದಾವಣಗೆರೆ ನಗರದಲ್ಲಿ ತಂಬಾಕು ನಿಯಂತ್ರಣ ಕೋಶ ಮತ್ತು ಮಹಾನಗರ ಪಾಲಿಕೆಯ ವತಿಯಿಂದ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ಮಾಡಿ ತಂಬಾಕು ಹಾಗೂ ಅದರ ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗಿದೆ.
ದಾವಣಗೆರೆಯಲ್ಲಿ ಅಕ್ರಮವಾಗಿ ತಂಬಾಕು ಉತ್ಪನ್ನ ಮಾರಾಟ: ಪಾಲಿಕೆಯಿಂದ ಅಂಗಡಿ ಮೇಲೆ ದಾಳಿ
ಜಪ್ತಿ ಮಾಡಲಾದ ವಸ್ತುಗಳನ್ನು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ನೋಡಲ್ ಅಧಿಕಾರಿಯಾದ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಇವರಿಗೆ ಹಸ್ತಾಂತರಿಸಲಾಯಿತು. ಈ ವೇಳೆ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತಂಡದವರು ಹಾಗೂ ಪಾಲಿಕೆ ಆರೋಗ್ಯ ನಿರೀಕ್ಷಕರು ಹಾಜರಿದ್ದರು.