ದಾವಣಗೆರೆ: ವಿಷಾಹಾರ ಸೇವಿಸಿ 100ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಬೆಣ್ಣೆಹಳ್ಳಿ ಗ್ರಾಮದಲ್ಲಿ ಜರುಗಿದೆ. ಅದೃಷ್ಟವಷಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.
ವಿಷಾಹಾರ ಸೇವಿಸಿ 100ಕ್ಕೂ ಹೆಚ್ಚು ಜನ ಅಸ್ವಸ್ಥ - davanagere latest news
ತಕ್ಷಣ ಎಲ್ರನ್ನೂ ಹತ್ತಿರದ ಬೆಣ್ಣೆಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಸೇರಿಸಲಾಗಿದೆ. ಹಲವರು ಗುಣಮುಖರಾಗಿ ಮನೆಗೆ ತೆರಳಿದ್ದಾರೆಂದು ತಿಳಿದು ಬಂದಿದೆ. ಇನ್ನು, 20ಕ್ಕೂ ಹೆಚ್ಚು ಜನರಿಗೆ ಜಗಳೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ..
ಬೆಣ್ಣೆಹಳ್ಳಿ ಗ್ರಾಮದ ವ್ಯಕ್ತಿಯೊಬ್ಬರ ಮನೆಯಲ್ಲಿ ಸೀಮಂತ ಕಾರ್ಯಕ್ರಮವಿತ್ತು. ಈ ವೇಳೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಜನರಿಗೆ ಹೋಳಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಕಾರ್ಯಕ್ರಮಕ್ಕೆ ಬಂದವರೆಲ್ಲರೂ ಭರ್ಜರಿ ಭೋಜನ ಸವೆದಿದ್ದರು. ಆದರೆ, ಆಹಾರ ಸೇವಿಸಿದ ನಂತರ 100ಕ್ಕೂ ಹೆಚ್ಚು ಜನರಲ್ಲಿ ವಾಂತಿ-ಭೇದಿ ಕಾಣಿಸಿದೆ.
ತಕ್ಷಣ ಎಲ್ರನ್ನೂ ಹತ್ತಿರದ ಬೆಣ್ಣೆಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಸೇರಿಸಲಾಗಿದೆ. ಹಲವರು ಗುಣಮುಖರಾಗಿ ಮನೆಗೆ ತೆರಳಿದ್ದಾರೆಂದು ತಿಳಿದು ಬಂದಿದೆ. ಇನ್ನು, 20ಕ್ಕೂ ಹೆಚ್ಚು ಜನರಿಗೆ ಜಗಳೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಗಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.