ದಾವಣಗೆರೆ:ಅರಬಗಟ್ಟೆಯ ಕೋವಿಡ್ ಆರೈಕೆ ಸೆಂಟರ್ನಲ್ಲಿ ಶಾಸಕ ರೇಣುಕಾಚಾರ್ಯ ಹೋಮ, ಹವನ ಮಾಡಿದ್ದಕ್ಕೆ ಶಾಸಕರ ವಿರುದ್ದ ಪ್ರಕರಣ ದಾಖಲಿಸಲು ತಹಸೀಲ್ದಾರ್ ಮುಂದಾದ ಬೆನ್ನಲ್ಲೇ ತಾಲೂಕು ಆಡಳಿತದ ವಿರುದ್ಧ ಸೋಂಕಿತರು ಆಕ್ರೋಶ ಹೊರಹಾಕಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆಯ ಕೋವಿಡ್ ಕೇರ್ ಸೆಂಟರ್ನಲ್ಲಿ ಸೋಂಕಿತರಿಂದ ವಿರೋಧ ವ್ಯಕ್ತವಾಗಿದೆ.
ಸೋಂಕಿತರು ತಹಸೀಲ್ದಾರ್ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಮಾಜಿ ಶಾಸಕರ ಶಾಂತನಗೌಡರ ಕುಮ್ಮಕ್ಕಿನಿಂದ ತಹಸೀಲ್ದಾರ್ ಅವರು ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ.