ಕರ್ನಾಟಕ

karnataka

ETV Bharat / state

ಗ್ರಾ.ಪಂ ಮತದಾನದ ವೇಳೆ ಎಡಗೈ ಹೆಬ್ಬೆರೆಳಿಗೆ ಶಾಯಿ: ದಾವಣಗೆರೆ ಡಿಸಿ - DC Mahantesh R. Bilagi

ಮತದಾನ ಮಾಡುವ ಮತದಾರರಿಗೆ ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಎಡಗೈ ಹೆಬ್ಬೆರೆಳಿಗೆ ಶಾಯಿ ಹಾಕಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ತಿಳಿಸಿದರು.

Davangere
ಗ್ರಾ.ಪಂ ಮತದಾನದ ವೇಳೆ ಎಡಗೈ ಹೆಬ್ಬೆರೆಳಿಗೆ ಶಾಯಿ: ದಾವಣಗೆರೆ ಡಿಸಿ

By

Published : Dec 14, 2020, 7:06 PM IST

ದಾವಣಗೆರೆ:ಈ ಬಾರಿಯ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮತದಾನ ಮಾಡುವ ಮತದಾರರಿಗೆ ಎಡಗೈ ಹೆಬ್ಬೆರಳಿಗೆ ಶಾಯಿ ಹಚ್ಚಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ತಿಳಿಸಿದರು.

ಜಿಲ್ಲಾಡಳಿತ ಭವನದಲ್ಲಿ ಇಂದು ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಸಿದ್ದತಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮತದಾನ ಮಾಡುವ ಮತದಾರರಿಗೆ ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಎಡಗೈ ಹೆಬ್ಬೆರೆಳಿಗೆ ಶಾಯಿ ಹಾಕಲಾಗುವುದು. ಜಿಲ್ಲಾಡಳಿತ ಎಲ್ಲ ಸಿದ್ದತೆ ಮಾಡಿಕೊಂಡಿದೆ ಎಂದರು.

ಚುನಾವಣಾ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ತರಬೇತಿ, ಮತಗಟ್ಟೆಗಳ ಮೂಲ ಸೌಕರ್ಯ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳ ಗುರುತಿಸುವಿಕೆ, ಸರ್ವಿಸ್ ವೋಟರ್ಸ್ ಪಟ್ಟಿ ತಯಾರಿಕೆ ಸೇರಿದಂತೆ ಎಲ್ಲ ಸಿದ್ದತೆ ಆಗಿದೆ. ಜಿಲ್ಲೆಯಲ್ಲಿ ಒಟ್ಟಾರೆ 1,279 ಮತಗಟ್ಟೆಗಳಿದ್ದು, ಅವುಗಳಲ್ಲಿ 174 ಸೂಕ್ಷ್ಮ, 143 ಅತಿಸೂಕ್ಷ್ಮ ಮತ್ತು 962 ಸಾಮಾನ್ಯ ಮತಗಟ್ಟೆಗಳಿವೆ. ಮತದಾರರು ಯಾವುದೇ ಭಯ, ಅಂಜಿಕೆಗೆ ಒಳಗಾಗದೇ ಮುಕ್ತ, ನ್ಯಾಯ ಸಮ್ಮತ ಮತ್ತು ನಿರ್ಭೀತವಾಗಿ ಮತ ಚಲಾಯಿಸಲು ಅನುಕೂಲವಾಗುವಂತೆ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.

ರಾಜಕೀಯ ಮುಖಂಡರ ಭಾವಚಿತ್ರ ಅಥವಾ ಪಕ್ಷದ ಚಿಹ್ನೆ ನಿಷೇಧ:

ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನು ಪಕ್ಷದ ಆಧಾರ ರಹಿತವಾಗಿ ನಡೆಸುವುದರಿಂದ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳನ್ನು ಮಾತ್ರ ಹಂಚಿಕೆ ಮಾಡಲಾಗಿರುತ್ತದೆ. ಎಲ್ಲ ರಾಜಕೀಯ ಪಕ್ಷದ ಮುಖಂಡರು ಹಾಗೂ ಸ್ಪರ್ಧಾಳುಗಳು ಕಾನೂನು ಉಲ್ಲಂಘನೆ ಮಾಡದಂತೆ ಚುನಾವಣಾ ನಿಯಮಗಳನ್ನು ಪಾಲನೆ ಮಾಡಬೇಕಿದೆ. ರಾಜಕೀಯ ಪಕ್ಷಗಳು ಸಭೆ, ಸಮಾರಂಭಗಳನ್ನು ಏರ್ಪಡಿಸಿ, ವೇದಿಕೆಯ ಮೇಲೆ ಪಕ್ಷದ ಬಾವುಟ, ಬ್ಯಾನರ್​​​​​ಗಳನ್ನು ಬಳಸುವಂತಿಲ್ಲ. ಸ್ಪರ್ಧಿಸುವ ಅಭ್ಯರ್ಥಿಗಳನ್ನು ತಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿ ಎಂದು ಪರಿಚಯಿಸುವುದು ಹಾಗೂ ಅವರ ಪರವಾಗಿ ಮತ ನೀಡಲು ಮತದಾರರನ್ನು ಕೋರುವಂತಿಲ್ಲ.

ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು, ರಾಜಕೀಯ ಮುಖಂಡರ ಭಾವಚಿತ್ರ ಪಕ್ಷದ ಚಿಹ್ನೆ ಇರುವ ಕರಪತ್ರಗಳನ್ನು ಮುದ್ರಿಸುವುದು, ಹಂಚುವುದು ಮಾಡುವಂತಿಲ್ಲ. ರಾಜಕೀಯ ಮುಖಂಡರ ಭಾವಚಿತ್ರ ರಾಜಕೀಯ ಪಕ್ಷಗಳ ಚಿಹ್ನೆ ಇರುವ ಕರಪತ್ರಗಳು, ಕಟೌಟ್‍ಗಳು, ಬ್ಯಾನರ್ ಮತ್ತು ಬಂಟಿಂಗ್‍ಗಳ ಮೂಲಕ ಪ್ರಚಾರ ಮಾಡುವಂತಿಲ್ಲ. ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಟಿ.ವಿ ಮಾಧ್ಯಮಗಳು ಪತ್ರಿಕೆಗಳ ಮೂಲಕ ರಾಜಕೀಯ ಮುಖಂಡರ ಭಾವಚಿತ್ರ ಮತ್ತು ಪಕ್ಷಗಳ ಚಿಹ್ನೆಗಳನ್ನು ಬಳಸಿ ಜಾಹೀರಾತು ನೀಡುವಂತಿಲ್ಲ ಎಂದು ಸೂಚನೆ ನೀಡಿದರು.

ಓದಿ: ದಾವಣಗೆರೆಯಲ್ಲಿ 4,457 ನಾಮಪತ್ರಗಳು ಸಲ್ಲಿಕೆ

ಎಸ್​ಪಿ ಹನುಮಂತರಾಯ ಮಾತನಾಡಿ ಗ್ರಾಮ ಪಂಚಾಯಿತಿ ಚುನಾವಣೆ ಸಂಬಂಧ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಎಲ್ಲಿಯಾದರೂ ಅಭ್ಯರ್ಥಿಗಳ ಹರಾಜು ಪ್ರಕ್ರಿಯೆ ಕಂಡು ಬಂದರೆ ಸಂಬಂಧಿಸಿದವರ ವಿರುದ್ದ ಎಫ್‍ಐಆರ್ ದಾಖಲಿಸಲಾಗುವುದು. ಚುನಾವಣೆ ಬಹಿಷ್ಕರಿಸುವವರ ಮನವೊಲಿಸಲಾಗುವುದು. ಈಗಾಗಲೇ ಪರವಾನಾಗಿ ಪಡೆದಿರುವ ಶಸ್ತ್ರಾಸ್ತ್ರಗಳನ್ನು ಇಲಾಖೆಯಲ್ಲಿ ಡೆಪಾಸಿಟ್ ಮಾಡಲು ತಿಳಿಸಲಾಗಿದೆ ಎಂದರು.

ABOUT THE AUTHOR

...view details