ದಾವಣಗೆರೆ:ಮಾಜಿ ಸಚಿವ ಹಾಗೂ ಕೆಪಿಸಿಸಿ ಖಜಾಂಚಿ ಶಾಮನೂರು ಶಿವಶಂಕರಪ್ಪ ಒಡೆತನದ ಮೆಡಿಕಲ್ ಕಾಲೇಜುಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಶಾಮನೂರು ಶಿವಶಂಕರಪ್ಪ ಒಡೆತನದ ಮೆಡಿಕಲ್ ಕಾಲೇಜುಗಳ ಮೇಲೆ ಐಟಿ ದಾಳಿ - ಕೆಪಿಸಿಸಿ ಖಜಾಂಚಿ ಶಾಮನೂರು ಶಿವಶಂಕರಪ್ಪ
ಆರು ಐಟಿ ಅಧಿಕಾರಿಗಳ ತಂಡ ಶಾಮನೂರು ಒಡೆತನದ ಜೆಜೆಎಂ, ಎಸ್ಎಸ್ ಮೆಡಿಕಲ್ ಕಾಲೇಜು ಹಾಗೂ ಬಾಪೂಜಿ ಡೆಂಟಲ್ ಕಾಲೇಜುಗಳಲ್ಲಿ ಶೋಧ ನಡೆಸುತ್ತಿದ್ದಾರೆ.
ಶಾಮನೂರು ಶಿವಶಂಕರಪ್ಪ ಒಡೆತನದ ಮೆಡಿಕಲ್ ಕಾಲೇಜುಗಳ ಮೇಲೆ ಐಟಿ ದಾಳಿ
ಆರು ಐಟಿ ಅಧಿಕಾರಿಗಳ ತಂಡ ಶಾಮನೂರು ಒಡೆತನದ ಜೆಜೆಎಂ, ಎಸ್ಎಸ್ ಮೆಡಿಕಲ್ ಕಾಲೇಜು ಹಾಗೂ ಬಾಪೂಜಿ ಡೆಂಟಲ್ ಕಾಲೇಜುಗಳಲ್ಲಿ ಶೋಧ ನಡೆಸುತ್ತಿದೆ. ವಿದ್ಯಾರ್ಥಿಗಳ ಪ್ರವೇಶ ಹಾಗೂ ಕಾಲೇಜು ಆಡಳಿತ ಮಂಡಳಿ ಸಂಗ್ರಹಿಸಿದ ಶುಲ್ಕ ಮತ್ತು ಸರ್ಕಾರ ನಿಗದಿ ಮಾಡಿದ ಶುಲ್ಕದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.
ಕೆಲ ವಿದ್ಯಾರ್ಥಿಗಳಿಗೆ ಅನಿರೀಕ್ಷಿತವಾಗಿ ಭೇಟಿ ಮಾಡಿ, ಶುಲ್ಕ ತುಂಬದ ವಿವರವನ್ನು ಅಧಿಕಾರಿಗಳು ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಗೋವಾ ಹಾಗೂ ಬೆಳಗಾವಿಯಿಂದ ಬಂದ ಐಟಿ ಅಧಿಕಾರಿಗಳ ತಂಡದಿಂದ ಈ ದಾಳಿ ನಡೆಸಿ ನಿರಂತರವಾಗಿ ಪರಿಶೀಲನೆ ನಡೆಸಲಾಗುತ್ತಿದೆ.
Last Updated : Feb 17, 2021, 12:29 PM IST