ದಾವಣಗೆರೆ:ಮಾಜಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಆಪ್ತನ ಮನೆ ಮೇಲೆ ನಗರದಲ್ಲಿ ಐಟಿ ದಾಳಿ ನಡೆದಿದೆ.
ಮಾಜಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಆಪ್ತನಿಗೆ ಐಟಿ ಶಾಕ್.. ಗುತ್ತಿಗೆದಾರ ಶಿವಕುಮಾರ್ ಮನೆಯಲ್ಲಿ ದಾಖಲೆ ಪರಿಶೀಲನೆ - ಗುತ್ತಿಗೆದಾರ
ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ ಎಸ್.ಎಸ್ ಮಲ್ಲಿಕಾರ್ಜುನ್ ಆಪ್ತನಿಗೆ ಐಟಿ ದಾಳಿ ಶಾಕ್-ಹದಿನೇಳು ಮಂದಿ ಅಧಿಕಾರಿಗಳ ತಂಡದಿಂದ ಸುಮಾರು ಆರು ಗಂಟೆ ಕಾಲ ದಾಖಲೆಗಳ ಪರಿಶೀಲನೆ- ಗುತ್ತಿಗೆದಾರ ಉದಯ್ ಶಿವಕುಮಾರ್ ಮನೆಯಲ್ಲಿ ಇನ್ನೂ ಬೀಡುಬಿಟ್ಟಿರುವ ಅಧಿಕಾರಿಗಳು.
ನಗರದ ವಿದ್ಯಾನಗರದ ಬಳಿಯ ಬನಶಂಕರಿ ಬಡಾವಣೆಯಲ್ಲಿರುವ ಉದಯ್ ಶಿವಕುಮಾರ್ ಮನೆ ಮೇಲೆ ದಾಳಿ ನಡೆದಿದೆ. ಇವರು ಪ್ರಥಮ ದರ್ಜೆಯ ಗುತ್ತಿಗೆದಾರರಾಗಿದ್ದಾರೆ.ಜಿಲ್ಲೆಯ ಬಹುತೇಕ ಕಾಮಗಾರಿಗಳನ್ನು ನಡೆಸುತ್ತಿದ್ದ ಇವರ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಸದ್ಯ ದಾಖಲೆ ಪರಿಶೀಲನೆ ನಡೆಸುತ್ತಿದ್ದು, ಮಾಹಿತಿ ಕಲೆ ಹಾಕುತ್ತಿದ್ದಾರೆ.
ಹದಿನೇಳು ಮಂದಿ ಅಧಿಕಾರಿಗಳ ತಂಡ ಪರಿಶೀಲನೆಯಲ್ಲಿ ತೊಡಗಿದ್ದು, ಸುಮಾರು ಆರು ಗಂಟೆಗಳ ಕಾಲ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇನ್ನೂ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ. ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆಯಾ ಅನ್ನೋ ಬಗ್ಗೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ.