ದಾವಣಗೆರೆ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ಕಾರಣರಾದವರಿಗೆ ಸೂಕ್ತ ಸ್ಥಾನಮಾನ ಸಿಗಬೇಕು. ಉಪ ಚುನಾವಣೆಯಲ್ಲಿ ಸೋತವರನ್ನು ಎಂಎಲ್ಸಿ ಮಾಡಬೇಕು ಎಂದು ಅರಣ್ಯ ಸಚಿವ ಆನಂದ್ ಸಿಂಗ್ ಹೇಳಿದರು.
ಬಿಜೆಪಿ ಸರ್ಕಾರ ಬರಲು ಕಾರಣರಾದವರನ್ನು ಎಂಎಲ್ಸಿ ಮಾಡಬೇಕು: ಸಚಿವ ಆನಂದ್ ಸಿಂಗ್ - State BJP Govt
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ಕಾರಣರಾದವರಿಗೆ ಸೂಕ್ತ ಸ್ಥಾನಮಾನ ಸಿಗಬೇಕು. ಉಪ ಚುನಾವಣೆಯಲ್ಲಿ ಸೋತವರನ್ನು ಎಂಎಲ್ಸಿ ಮಾಡಬೇಕು ಎಂದು ಅರಣ್ಯ ಸಚಿವ ಆನಂದ್ ಸಿಂಗ್ ಹೇಳಿದರು.
![ಬಿಜೆಪಿ ಸರ್ಕಾರ ಬರಲು ಕಾರಣರಾದವರನ್ನು ಎಂಎಲ್ಸಿ ಮಾಡಬೇಕು: ಸಚಿವ ಆನಂದ್ ಸಿಂಗ್ It is government responsibility to make the MLCs: Anand Singh](https://etvbharatimages.akamaized.net/etvbharat/prod-images/768-512-7624687-408-7624687-1592214905911.jpg)
ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಲಕ್ಷ್ಮೀಪುರದಲ್ಲಿ ಮಾತನಾಡಿದ ಅವರು, ಹೆಚ್.ವಿಶ್ವನಾಥ್, ಎಂಟಿಬಿ ನಾಗರಾಜ್ ಸೇರಿದಂತೆ 17 ಶಾಸಕರು ಪಕ್ಷ ಬಿಟ್ಟು ರೆಬಲ್ ಆಗಿ ಬಂದಿದ್ದವರು. ಅವರನ್ನೂ ಎಂಎಲ್ಸಿ ಮಾಡಬೇಕು. ಈ ಬಗ್ಗೆ ಪಕ್ಷದ ವರಿಷ್ಠರು ಸೂಕ್ತ ತೀರ್ಮಾನ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಕೊರೊನಾ ವೇಗವಾಗಿ ಹರಡುತ್ತಿದೆ. ಆರೋಗ್ಯವಂತರಲ್ಲೂ ಇದ್ದಕ್ಕಿದ್ದಂತೆ ಸೋಂಕು ಪತ್ತೆಯಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ಜಿಂದಾಲ್ ಕಂಪನಿಯಲ್ಲಿ ವೇಗವಾಗಿ ಕೊರೊನಾ ಹರಡುತ್ತಿರುವ ಹಿನ್ನೆಲೆ ಈಗಾಗಲೇ 4 ಸಾವಿರ ಕಾರ್ಮಿಕರನ್ನು ಸ್ಥಳಾಂತರ ಮಾಡಲಾಗಿದೆ. ಕೆಲ ಬಾಯ್ಲರ್ಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ಹಾಗಾಗಿ ಜಿಂದಾಲ್ ಫ್ಯಾಕ್ಟರಿ ಬಂದ್ ಮಾಡಲು ಆಗುತ್ತಿಲ್ಲ. ಒಂದು ವೇಳೆ ಸೋಂಕು ಹೆಚ್ಚಾದರೆ ಕಂಪನಿಯನ್ನು ಬಂದ್ ಮಾಡಲಾಗುತ್ತದೆ ಎಂದರು.