ದಾವಣಗೆರೆ:ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ನಡೆಸಿದ ಜನಸ್ಪಂದನ ಸಭೆಯಲ್ಲಿ ನಾಗರಿಕರು ತಮ್ಮ ಅಹವಾಲುಗಳನ್ನು ತೋಡಿಕೊಂಡರು.
ಕೆಲ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿದ ಡಿಸಿ, ಇನ್ನೂ ಕೆಲವರ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದರು. ಇಂದು 50ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದು, ಎಲ್ಲಾ ಅರ್ಜಿಗಳನ್ನು ಪರಿಶೀಲನೆ ನಡೆಸಿ ಪರಿಹಾರ ಕಲ್ಪಿಸುವುದಾಗಿ ತಿಳಿಸಿದರು.
ರಾಜುಕಾಲುವೆ ಒತ್ತುವರಿ ಕುರಿತು ಡಿಸಿಗೆ ದೂರು ನೀಡಿದ ಕನ್ನಡ ಒಕ್ಕೂಟದ ಸದಸ್ಯರು ದಾವಣಗೆರೆ ನಗರದಾದ್ಯಂತ ರಾಜಕಾಲುವೆ ಮೇಲೆ ಕಟ್ಟಿರುವ ಕಟ್ಟಡಗಳನ್ನು ನೆಲಸಮ ಮಾಡಿ, ಇದಕ್ಕೆ ಅನುಮತಿ ನೀಡಿದ ಅಧಿಕಾರಿಗಳನ್ನು ತಕ್ಷಣ ಅಮಾನತು ಮಾಡುವಂತೆ ಕನ್ನಡಪರ ಒಕ್ಕೂಟದ ಸದಸ್ಯರು ನೀಡಿದ ಅರ್ಜಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ, ಈ ಬಗ್ಗೆ ಸ್ಥಳ ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದರು.
ಇದನ್ನೂ ಓದಿ: ಸಾರ್ವಜನಿಕರು ಕಡ್ಡಾಯವಾಗಿ ಕೋವಿಡ್ ನಿಯಮ ಪಾಲಿಸಿ: ಡಿಸಿ ರೋಹಿಣಿ ಸಿಂಧೂರಿ
ಸೌದಿ ಅರೇಬಿಯಾದಲ್ಲಿ ಸಿಲುಕಿಕೊಂಡಿರುವ ಮಹಿಳೆಯನ್ನು ಕರೆತರುವಂತೆ ಮಹಿಳೆಯೋರ್ವಳು ನೀಡಿದ ಅರ್ಜಿಯನ್ನು ಸ್ವೀಕರಿಸಿದ ಡಿಸಿ, ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸುತ್ತೇವೆ ಎಂದು ಮಹಿಳೆಗೆ ಧೈರ್ಯ ತುಂಬಿದರು.