ದಾವಣಗೆರೆ:ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಕರ್ನಾಟಕ ಯುವಶಕ್ತಿ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು.
ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬ ಖಂಡಿಸಿ ಪ್ರತಿಭಟನೆ - ದಾವಣಗೆರೆ ಲೇಟೆಸ್ಟ್ ನ್ಯೂಸ್
ಸ್ಮಾರ್ಟ್ ಸಿಟಿ ಕಾಮಗಾರಿ ಮಂದಗತಿಯಲ್ಲಿ ನಡೆಯುತ್ತಿದ್ದು, ಕಾಮಗಾರಿಗಳಿಂದ ಬೀದಿಬದಿ ವ್ಯಾಪಾರಿಗಳಿಗೆ ಸಮಸ್ಯೆಯಾಗುತ್ತಿದ್ದು, ವ್ಯಾಪಾರವಿಲ್ಲದೆ ಹೈರಾಣಾಗಿದ್ದಾರೆ. ಹೀಗಾಗಿ ಕೂಡಲೇ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಕರ್ನಾಟಕ ಯುವಶಕ್ತಿ ವೇದಿಕೆ ಕಾರ್ಯಕರ್ತರು ಒತ್ತಾಯಿಸಿದರು.
ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬ ನೀತಿ ಖಂಡಿಸಿ ಪ್ರತಿಭಟನೆ
ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟಿಸಿದ ಯುವಶಕ್ತಿ ವೇದಿಕೆ ಕಾರ್ಯಕರ್ತರು, ಸಿಸಿ ರಸ್ತೆ ಒಡೆಯುವ ಮೂಲಕ ಕಾಮಗಾರಿ ಆರಂಭ ಮಾಡಿರುವುದು ದುರದೃಷ್ಟಕರ. ಮಂದಗತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳಿಂದ ಬೀದಿಬದಿ ವ್ಯಾಪಾರಿಗಳಿಗೆ ಸಮಸ್ಯೆಯಾಗುತ್ತಿದ್ದು, ವ್ಯಾಪಾರವಿಲ್ಲದೆ ಹೈರಾಣಾಗಿದ್ದಾರೆ. ಕೂಡಲೇ ಕಾಮಗಾರಿ ಪೂರ್ಣಗೊಳಿಸುವಂತೆ ಜಿಲ್ಲಾಡಳಿತಕ್ಕೆ ಆಗ್ರಹಿಸಲಾಯಿತು.
ಅಂಬೇಡ್ಕರ್ ವೃತ್ತದಿಂದ ತಮ್ಮ ಪ್ರತಿಭಟನಾ ಮೆರವಣಿಗೆ ಆರಂಭಿಸಿ, ಜಯದೇವ ವೃತ್ತದ ಮುಖಾಂತರ ಸಾಗಿ ಎಸಿ ಅವರಿಗೆ ಮನವಿ ಸಲ್ಲಿಸಿದರು.