ದಾವಣಗೆರೆ: ಕುಡಿಯುವ ನೀರಿಗಾಗಿ ಖಾಲಿ ಕೊಡ ಸಮೇತ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಮಹಿಳೆಯರು ಪ್ರತಿಭಟನೆ ನಡೆಸಿದರು.
ಅಸಮರ್ಪಕ ನೀರು ಪೂರೈಕೆ... ಪಿಡಿಒ ವಿರುದ್ಧ ಮಹಿಳೆಯರ ಆಕ್ರೋಶ - Kannada news
ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡುವಂತೆ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿದ ಮಹಿಳೆಯರು.
ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡುವಂತೆ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿದ ಮಹಿಳೆಯರು
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಭಾನುವಳ್ಳಿ ಗ್ರಾಮ ಪಂಚಾಯಿತಿಗೆ ಮತ್ತಿಗೆ ಹಾಕಿ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲವು ದಿನಗಳಿಂದ ಕುಡಿಯುವ ನೀರನ್ನು ಬಿಟ್ಟಿಲ್ಲ. ನೀರು ಬಿಡುವಂತೆ ಕೇಳಿದರೆ ಇದಕ್ಕೂ ತಮಗೂ ಸಂಬಂಧವೇ ಇಲ್ಲ ಎಂಬಂತೆ ಪಿಡಿಒ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು. ಅಲ್ಲದೆ ಪಿಡಿಒ ರೇಣುಕಾಬಾಯಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.