ದಾವಣಗೆರೆ: ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಗುತ್ತಿಗೆ ಆಧಾರಿತ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಹರಿಹರ ಪಟ್ಟಣದ ಕೇಶವನಗರದಲ್ಲಿ ನಡೆದಿದೆ.
ಹರಿಹರ: ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ಕಾರ್ಮಿಕ ಸಾವು - labor death by Electricution in the Harihara
ಹರಿಹರ ತಾಲೂಕಿನ ಬೆಳ್ಳೂಡಿ ಗ್ರಾಮದ ಗುತ್ತಿಗೆ ಆಧಾರಿತ ಕಾರ್ಮಿಕ ಮಾರುತಿ ಎಂಬುವವರು ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ.
ಹರಿಹರ ತಾಲೂಕಿನ ಬೆಳ್ಳೂಡಿ ಗ್ರಾಮದ ಮಾರುತಿ ಮೃತಪಟ್ಟವರಾದರೆ, ಮಹೇಶ್ ಗಾಯಗೊಂಡವರು. ಬೆಸ್ಕಾಂ ಇಲಾಖೆಯ ವಿದ್ಯುತ್ ಕಂಬ ಬದಲಿಸುವ ಕಾಮಗಾರಿ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಕಾಮಗಾರಿ ನಿರ್ವಹಿಸುವ ಸಂದರ್ಭದಲ್ಲಿ ಅಗತ್ಯ ಸುರಕ್ಷಾ ಪರಿಕರಗಳನ್ನು ಬಳಸದ ಕಾರಣ ಕಂಬದ ಮೇಲಿದ್ದ ಇಬ್ಬರು ಕಾರ್ಮಿಕರಿಗೆ ಶಾಕ್ ತಗುಲಿ ಆಘಾತಕ್ಕೀಡಾಗಿದ್ದಾರೆ.
ಗುತ್ತಿಗೆ ಸಂಸ್ಥೆ ಹಾಗೂ ಬೆಸ್ಕಾಂ ಸಿಬ್ಬಂದಿ ಕಾರ್ಮಿಕರನ್ನು ಕೆಳಗಿಳಿಸಿದರೂ ಈ ವೇಳೆಗೆ ಮಾರುತಿ ಮೃತಪಟ್ಟಿದ್ದಾರೆ. ಮಹೇಶ್ ತೀವ್ರ ಅಸ್ವಸ್ಥಗೊಂಡಿದ್ದು, ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.
TAGGED:
labor death by electrocution