ದಾವಣಗೆರೆ:ಪಟ್ಟಣದಲ್ಲಿ ಆಹಾರ ಧಾನ್ಯಗಳ ಕಿಟ್ ಪಡೆಯಲು ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಮುಗಿಬಿದ್ದ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.
ದಾವಣಗೆರೆಯಲ್ಲಿ ಆಹಾರದ ಕಿಟ್ ಪಡೆಯಲು ಮುಗಿಬಿದ್ದವರಿಗೆ ಲಾಠಿ ಏಟು - Davanagere News
ದಾವಣಗೆರೆ ಜಿಲ್ಲೆಯಲ್ಲಿ ಆಹಾರ ಧಾನ್ಯಗಳ ಕಿಟ್ ಪಡೆಯಲು ಬಂದ ಸಾರ್ವಜನಿಕರಿಗೆ ಪೊಲೀಸರು ಲಾಠಿ ಏಟು ಕೊಟ್ಟಿದ್ದಾರೆ.
ಸಾಮಾಜಿಕ ಅಂತರ ಕಾಯ್ದುಕೊಳ್ಳದ ಜನರಿಗೆ ಲಾಠಿ ರುಚಿ ತೋರಿಸಿದ ಪೊಲೀಸರು
ಜಗಳೂರು ಶಾಸಕ ಎಸ್.ವಿ. ರಾಮಚಂದ್ರಪ್ಪ ನೇತೃತ್ವದಲ್ಲಿ ಲಾಕ್ಡೌನ್ ಇರುವುದರಿಂದ ಬಡವರು, ನಿರ್ಗತಿಕರಿಗೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಅವರಿಂದ ಕಿಟ್ ವಿತರಿಸುವ ಕಾರ್ಯಕ್ರಮ ಆಯೋಜಿಸಿದ್ದರು. ಇದನ್ನು ಪಡೆಯಲು ತಾಲೂಕಿನ ವಿವಿಧೆಡೆಯಿಂದ ನೂರಾರು ಜನರು ಆಗಮಿಸಿದ್ದರು. ಪೊಲೀಸರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸರತಿ ಸಾಲಿನಲ್ಲಿ ಬಂದು ಕಿಟ್ ಪಡೆದುಕೊಳ್ಳುವಂತೆ ಮನವಿ ಮಾಡಿದರು. ಆದರೆ, ಅಲ್ಲಿಗೆ ಬಂದ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಮುಗಿಬಿದ್ದರು. ಸ್ಥಳದಲ್ಲಿ ಪೊಲೀಸರು ಇದನ್ನು ನಿಯಂತ್ರಿಸಲು ಲಾಠಿ ಬೀಸಿದರು.