ದಾವಣಗೆರೆ: ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಡಿ.ಬಸವರಾಜ್ ಅವರಿಗೆ ಪ್ರಾಣ ಬೆದರಿಕೆ ಹಾಕಿ ಅನಾಮಧೇಯ ವ್ಯಕ್ತಿಯಿಂದ ಪತ್ರ ಬಂದಿದೆ.
ಸಾವರ್ಕರ್ ಬಗ್ಗೆ ಪ್ರಶ್ನಿಸಿದ ಕಾಂಗ್ರೆಸ್ ಮುಖಂಡನಿಗೆ ಪ್ರಾಣ ಬೆದರಿಕೆ ಪತ್ರ
ಸಾವರ್ಕರ್ಗೆ ದೇಶದ ಮಹೋನ್ನತ ನಾಗರಿಕ ಪ್ರಶಸ್ತಿ 'ಭಾರತ ರತ್ನ' ನೀಡುವುದನ್ನು ವಿರೋಧಿಸಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಕಾಂಗ್ರೆಸ್ ಮುಖಂಡ ಡಿ.ಬಸವರಾಜ್ ಅವರಿಗೆ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಪತ್ರ ಬಂದಿದೆ.
ಕಳೆದ ಡಿಸೆಂಬರ್ 26 ರಂದು ಫೋನ್ ಮಾಡಿ ಬೆದರಿಕೆ ಹಾಕಿರುವ ವ್ಯಕ್ತಿ, ಸಾವರ್ಕರ್ಗೆ ಭಾರತ ರತ್ನ ನೀಡುವುದನ್ನು ವಿರೋಧಿಸಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಡಿ.ಬಸವರಾಜ್ ಅವರಿಗೆ ಎಚ್ಚರಿಕೆ ನೀಡಿದ್ದಾನೆ. ಸಾವರ್ಕರ್ ಬಗ್ಗೆ ನೀಡಿದ ಹೇಳಿಕೆ ವಾಪಸ್ ಪಡೆದು ಸುದ್ದಿಗೋಷ್ಠಿ ನಡೆಸಿ ಕ್ಷಮೆ ಕೇಳುವಂತೆ ಪತ್ರದಲ್ಲಿ ಎಚ್ಚರಿಸಲಾಗಿದೆ.
ಈ ಬಗ್ಗೆ ಡಿಸೆಂಬರ್ 26ಕ್ಕೆ ದಾವಣಗೆರೆ ನಗರದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಡಿ. ಬಸವರಾಜ್ ದೂರು ನೀಡಿದ್ದರು. ಈಗ ಮತ್ತೆ ಪತ್ರ ಬರೆದು ಬೆದರಿಕೆ ಹಾಕಿದ್ದು, ಪತ್ರದ ಮೂಲಕ ಬೆದರಿಕೆ ಹಾಕಿರುವ ವ್ಯಕ್ತಿಯನ್ನು ಕೂಡಲೇ ಪತ್ತೆ ಹಚ್ಚಬೇಕು ಎಂದು ಬಸವರಾಜ್ ಪೊಲೀಸರನ್ನು ಒತ್ತಾಯಿಸಿದ್ದಾರೆ.