ಕರ್ನಾಟಕ

karnataka

ETV Bharat / state

ಈ ಬಾರಿ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತೆ:  ಶಾಮನೂರು ಶಿವಶಂಕರಪ್ಪ ವಿಶ್ವಾಸ - ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆ

ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಮತಗಟ್ಟೆಗೆ ಬಂದು ಮತ ಚಲಾಯಿಸಿದರು.

ಶಿವಶಂಕರಪ್ಪ

By

Published : Nov 12, 2019, 4:57 PM IST

ದಾವಣಗೆರೆ:ನಗರದಲ್ಲಿ ಮಹಾನಗರ ಪಾಲಿಕೆ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಮತಗಟ್ಟೆಗೆ ಬಂದು ಮತ ಚಲಾಯಿಸಿದರು.

ಶಿವಶಂಕರಪ್ಪ ಎಂಸಿಸಿಬಿ ಬ್ಲಾಕ್​ನ ಐಎಂಎ ಹಾಲ್ ನಲ್ಲಿ ತೆರೆಯಲಾಗಿದ್ದ 38ನೇ ವಾರ್ಡ್​ನ ಮತಗಟ್ಟೆ 318ರ ಮತ ಕೇಂದ್ರದಲ್ಲಿ ಹಕ್ಕು ಚಲಾಯಿಸಿದರು. ಬಳಿಕ ಮಾತನಾಡಿದ ಅವರು, ಈ ಬಾರಿ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್ ಮಾಡಲಿದೆ. ಕಳೆದ ಬಾರಿಯಂತೆ ಈ ಬಾರಿಯೂ ನಾವೇ ಅಧಿಕಾರದ ಗದ್ದುಗೆ ಹಿಡಿಯಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಾಲಿಕೆ ಚುನಾವಣೆಯಲ್ಲಿ ಮತ ಚಲಾಯಿಸಿದ ಶಾಮನೂರು

ರಾಜ್ಯ ರಾಜಕಾರಣದ ಬಗ್ಗೆ ಮಾತನಾಡಲು ನಿರಾಕರಿಸಿದ ಅವರು, ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರ ಬಗ್ಗೆಯಾಗಲೀ, ಬೇರೆಯವರ ಕುರಿತಾಗಲೀ ಮಾತನಾಡಲ್ಲ ಎಂದು ಹೇಳಿದರು.

ABOUT THE AUTHOR

...view details