ಕರ್ನಾಟಕ

karnataka

ETV Bharat / state

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ, ದಾವಣಗೆರೆಯಲ್ಲಿ ನಿರ್ಬಂಧ ಬಿಗಿಗೊಳಿಸಿದ ಜಿಲ್ಲಾಡಳಿತ - Lockdown tightened in Davanagere

ದಿನೇ ದಿನೇ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ದಾವಣಗೆರೆ ಜಿಲ್ಲಾಡಳಿತ ಲಾಕ್ ಡೌನ್​ ಇನ್ನಷ್ಟು ಬಿಗಿಗೊಳಿಸಿದ್ದು, ಅಗತ್ಯ ವಸ್ತುಗಳ ಮಾರಾಟ ಹೊರತು ಯಾವುದೇ ಅಂಗಡಿ ಮುಂಗಟ್ಟು ತೆರೆಯಬಾರದು ಮತ್ತು ಜನರು ಮನೆಯಿಂದ ಹೊರಗಡೆ ಕಾಲಿಡಬಾರದು ಎಂದು ಸೂಚಿಸಿದೆ.

Lockdown in Davanagere
ಲಾಕ್ ಡೌನ್ ಬಿಗಿಗೊಳಿಸಿದ ದಾವಣಗೆರೆ ಜಿಲ್ಲಾಡಳಿತ

By

Published : May 5, 2020, 10:44 AM IST

ದಾವಣಗೆರೆ : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಹಿನ್ನೆಲೆ ಜಿಲ್ಲಾಡಳಿತ ಬಿಗಿ ಕ್ರಮಕ್ಕೆ ಮುಂದಾಗಿದ್ದು, ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 7 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಉಳಿದಂತೆ ಎಲ್ಲಾ ಅಂಗಡಿಗಳು ಬಂದ್ ಇರಬೇಕೆಂದು ಕಟ್ಟಪ್ಪಣೆ ವಿಧಿಸಿದೆ.
ದಿನಸಿ, ಔಷಧ, ತರಕಾರಿ, ಮೊಟ್ಟೆ, ಹಾಲು, ಬೇಕರಿ ಹಾಗೂ ಕೃಷಿಗೆ ಸಂಬಂಧಿತ ಬೀಜ, ಗೊಬ್ಬರ ಸೇರಿದಂತೆ ಅಗತ್ಯ ವಸ್ತುಗಳನ್ನು ನಿಗದಿಪಡಿಸಿದ ಅವಧಿಯಲ್ಲಿ ಖರೀದಿಸಬೇಕು. ಬಳಿಕ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಸೂಚಿಸಿದ್ದಾರೆ.

ಲಾಕ್ ಡೌನ್ ಬಿಗಿಗೊಳಿಸಿದ ದಾವಣಗೆರೆ ಜಿಲ್ಲಾಡಳಿತ
ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ 45 ವಾರ್ಡ್​ಗಳು, ಕಂಟೈನ್ ಮೆಂಟ್​ ಝೋನ್​ಗೆ ಬರುವ 15 ರಿಂದ 20 ಗ್ರಾಮಗಳಲ್ಲಿ ಈ ನಿಯಮ ಅನ್ವಯವಾಗಲಿದ್ದು, ಈಗಾಗಲೇ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಕಳೆದ ಮೂರು ದಿನಗಳಿಂದ 400 ಸ್ಯಾಂಪಲ್​​ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ಮಧ್ಯಾಹ್ನ 1 ಗಂಟೆ ಬಳಿಕ ಯಾವುದೇ ವಾಹನ ಓಡಾಡುವಂತಿಲ್ಲ. ಜನರು ಮನೆಯಿಂದ ಹೊರ ಬರುವಂತಿಲ್ಲ. ಒಂದು ವೇಳೆ ಹೊರಗೆ ಬಂದರೆ ಕಠಿಣ ಕ್ರಮ ಅನಿವಾರ್ಯ. ಒಬ್ಬರಿಂದ ಒಬ್ಬರಿಗೆ ಸೋಂಕು ಹರಡುವುದನ್ನು ತಡೆಯಲು ಈ ಕ್ರಮ ತೆಗೆದುಕೊಳ್ಳಲಾಗಿದೆ. ಜನರು ಸಹಕರಿಸಬೇಕು ಎಂದು ಎಸ್ಪಿ ಹನುಮಂತರಾಯ ಮನವಿ ಮಾಡಿದ್ದಾರೆ.

ABOUT THE AUTHOR

...view details