ದಾವಣಗೆರೆ: ಲಂಚ ಸ್ವೀಕರಿಸುತ್ತಿದ್ದ ವೇಳೆ ಪಿಡಿಒ ಒಬ್ಬರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಶುಕ್ರವಾರ ನಡೆದಿದೆ. ಜಿಲ್ಲೆಯ ಜಗಳೂರು ತಾಲೂಕಿನ ದೇವಿಕೆರೆ ಗ್ರಾಮ ಪಂಚಾಯಿತಿ ಪಿಡಿಒ ಬಸವರಾಜ್, ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಪಿಡಿಒ ಬಸವರಾಜ್ ಜಗಳೂರು ತಾಲೂಕಿನ ಮೆದಿಕೆರೆನಹಳ್ಳಿ ಗ್ರಾಮದ ನಿವಾಸಿ ಶಾಂತಕುಮಾರ್ ಅವರ ತಾಯಿಯಾದ ಶ್ರೀಮತಿ ಶಾರದಮ್ಮ ಇವರ ಹೆಸರಿನಲ್ಲಿರುವ ಮನೆಯ ಇ - ಸ್ವತ್ತು ಮಾಡಿಕೊಡುವ ಸಂಬಂಧ 10,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.