ದಾವಣಗೆರೆ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಲಾಕ್ಡೌನ್ ಕರೆ ನೀಡಲಾಗಿದ್ದರೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಕ್ಯಾರೇ ಎನ್ನದೇ ಬಿಜೆಪಿ ಬೆಂಬಲಿಗರ ಜೊತೆ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಆಚರಿಸಿದ್ದಾರೆ.
ಲಾಕ್ಡೌನ್ ಉಲ್ಲಂಘಿಸಿದ ಎಂ.ಪಿ. ರೇಣುಕಾಚಾರ್ಯ...! - ಲಾಕ್ ಡೌನ್ ಉಲ್ಲಂಘಿಸಿದ ಎಂ. ಪಿ. ರೇಣುಕಾಚಾರ್ಯ
ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಇಂದು ಬಿಜೆಪಿ ಬೆಂಬಲಿಗರ ಜೊತೆ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಆಚರಿಸಿದ್ದಾರೆ.
ಎಂ.ಪಿ. ರೇಣುಕಾಚಾರ್ಯ
ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಏರ್ಪಡಿಸಿದ್ದ ಬಿಜೆಪಿ ಸಂಸ್ಥಾಪನಾ ದಿನಾಚರಣೆ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಅಕ್ಕ- ಪಕ್ಕ ನಿಂತಿರುವುದು ಕಂಡು ಬಂದಿದೆ. ಈ ಮೂಲಕ ಪ್ರಧಾನಿ ಮೋದಿ ಅವರು ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂಬ ಕರೆಗೆ ಬಿಜೆಪಿ ಶಾಸಕರೇ ಉಲ್ಲಂಘನೆ ಮಾಡಿದಂತಾಗಿದೆ.
ಸುಮಾರು 20ಕ್ಕೂ ಹೆಚ್ಚು ಜನ ಅಕ್ಕಪಕ್ಕದಲ್ಲಿ ನಿಂತಿದ್ದಾರೆ. ರೇಣುಕಾಚಾರ್ಯ ಅವರ ಜೊತೆ ನಿಂತಿದ್ದು, ಸೋಷಿಯಲ್ ಡಿಸ್ಟೆನ್ಸ್ಗೆ ಸ್ಪಂದಿಸದಿರುವುದು ಈಗ ಚರ್ಚೆಗೆ ಕಾರಣವಾಗಿದ್ದರೆ, ರೇಣುಕಾಚಾರ್ಯ ಮಾತ್ರ ಆ ರೀತಿ ಏನೂ ಆಗಿಲ್ಲ ಅಂತಾ ಹೇಳಿದ್ದಾರೆ.