ದಾವಣಗೆರೆ:ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ ದಾವಣಗೆರೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಾಲ್ಕು ವರ್ಷ ಶಿಕ್ಷೆ, 25 ಸಾವಿರ ರೂ. ದಂಡ ವಿಧಿಸಿ ಶಿಕ್ಷೆ ಪ್ರಕಟಿಸಿದೆ.
ಆರೋಪಿ ಆರ್.ರಾಜಪ್ಪ ಮೂಲತಹ ಭದ್ರಾವತಿ ತಾಲೂಕಿನ ಸೈದರ್ ಕಲ್ಲಳ್ಳಿ ಗ್ರಾಮದವನಾಗಿದ್ದು, ತನ್ನ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದು ಅದನ್ನು ಹೊನ್ನಾಳಿ ತಾಲೂಕಿನ ಸಾಸ್ವೇಹಳ್ಳಿಯಲ್ಲಿ ಮಾರಾಟ ಮಾಡುತ್ತಿದ್ದ.
ವಿಷಯ ತಿಳಿದ ಪೊಲೀಸರು ದಾಳಿ ನಡೆಸಿದ್ದು, 800 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದರು. ಇದರ ಜೊತೆಯಲ್ಲಿ 51 ಕೆಜಿ ಗಾಂಜಾವನ್ನು ಹೊನ್ನಾಳಿ ಪೊಲೀಸರು ವಶಪಡಿಸಿಕೊಂಡು, ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಇದೀಗ ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ದಾವಣಗೆರೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಮೂರ್ತಿ ಕುಲಕರ್ಣಿ ಅಂಬಾದಾಸ್, ನಾಲ್ಕು ವರ್ಷ ಶಿಕ್ಷೆ, 25 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.