ದಾವಣಗೆರೆ:ಎಲ್ಲ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲು ಆಗ್ರಹಿಸಿ ನಗರದಲ್ಲಿ ಜಿಲ್ಲಾ AIDSO ವಿದ್ಯಾರ್ಥಿ ಸಂಘಟನೆಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಎಲ್ಲ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆಗೆ ಆಗ್ರಹಿಸಿ AIDSO ಪ್ರತಿಭಟನೆ..
ಸರ್ಕಾರ 2019-20ನೇ ವರ್ಷದ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡುತ್ತಿರುವುದು ಸಂತೋಷದ ವಿಷಯ. ಆದರೆ, ದ್ವಿತೀಯ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಈ ಯೋಜನೆಯ ಫಲ ಸಿಗದೇ ಇರುವುದು ವಿಷಾಧನೀಯ. ಇದು ವಿದ್ಯಾರ್ಥಿಗಳಲ್ಲಿ ತಾರತಮ್ಮ ಸೃಷ್ಟಿಸಿದಂತಾಗಿದೆ.
ನಗರದ ಜಯದೇವ ವೃತ್ತದಲ್ಲಿ ಜಮಾಯಿಸಿದ ನೂರಾರು ವಿದ್ಯಾರ್ಥಿಗಳು, ಸರ್ಕಾರ ಎಲ್ಲಾ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್ ವಿತರಿಸುವ ಭರವಸೆ ಈಡೇರಿಸಿಲ್ಲ. ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಲ್ಯಾಪ್‌ಟಾಪ್ ವಿತರಿಸಿದೆ. ಕೆಲವೇ ತಿಂಗಳಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳ ಅಧ್ಯಯನ ಅವಧಿ ಪೂರ್ಣಗೊಳ್ಳಲಿದೆ. ಈ ಶೈಕ್ಷಣಿಕ ಅವಧಿ ಪೂರ್ಣಗೊಳ್ಳುವ ಮುನ್ನ ಲ್ಯಾಪ್‌ಟಾಪ್ ವಿತರಿಸಬೇಕೆಂದು ಆಗ್ರಹಿಸಿದರು.
ಸರ್ಕಾರ 2019-20ನೇ ವರ್ಷದ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡುತ್ತಿರುವುದು ಸಂತೋಷದ ವಿಷಯ.ಆದರೆ, ದ್ವಿತೀಯ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಈ ಯೋಜನೆಯ ಫಲ ಸಿಗದೇ ಇರುವುದು ವಿಷಾಧನೀಯ. ಇದು ವಿದ್ಯಾರ್ಥಿಗಳಲ್ಲಿ ತಾರತಮ್ಮ ಸೃಷ್ಟಿಸಿದಂತಾಗಿದೆ. ಎಲ್ಲಾ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್ ವಿತರಿಸಿದರೆ, ಮುಂದೆ ಉನ್ನತ ವ್ಯಾಸಂಗಕ್ಕೆ ಅನುಕೂಲವಾಗುತ್ತದೆ ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.