ಕರ್ನಾಟಕ

karnataka

ETV Bharat / state

ವೇತನ ಹೆಚ್ಚಿಸುವಂತೆ ಆಗ್ರಹ: ಬಿಸಿಯೂಟ ತಯಾರಕರ ಪ್ರತಿಭಟನೆ - Midday meals makers protest

ಬಿಸಿಯೂಟ ತಯಾರಕರಿಗೆ ವೇತನ ಹೆಚ್ಚಳ ಮಾಡುವಂತೆ  ಆಗ್ರಹಿಸಿ, ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಿಸಿಯೂಟ ತಯಾರಕರು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೇತನ ಹೆಚ್ಚಿಸುವಂತೆ ಆಗ್ರಹಿಸಿ ಬಿಸಿಯೂಟ ತಯಾರಕರ ಪ್ರತಿಭಟನೆ..

By

Published : Aug 3, 2019, 8:12 PM IST

ದಾವಣಗೆರೆ:ಬಿಸಿಯೂಟ ತಯಾರಕರಿಗೆ ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ, ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಿಸಿಯೂಟ ತಯಾರಕರು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ವೇತನ ಹೆಚ್ಚಿಸುವಂತೆ ಆಗ್ರಹಿಸಿ ಬಿಸಿಯೂಟ ತಯಾರಕರ ಪ್ರತಿಭಟನೆ

ಕಳೆದ 17 ವರ್ಷಗಳಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ರಾಜ್ಯಾದ್ಯಂತ 1 ಲಕ್ಷದ18 ಸಾವಿರ ಜನರು ಕೆಲಸ ನಿರ್ವಹಿಸುತ್ತಿದ್ದು, ಅಡುಗೆ ತಯಾರಕರಿಗೆ 2,700, ಸಹಾಯಕಿಯರಿಗೆ 2,600 ಮಾತ್ರ ಸಂಭಾವನೆ ನೀಡುತ್ತಿದ್ದಾರೆ. ಇದರಿಂದ ಜೀವನ ನಡೆಸುವುದು ಕಷ್ಟವಾಗಿದ್ದು, ಸರ್ಕಾರ ಕೂಡಲೇ ಬಿಸಿಯೂಟ ತಯಾರಕರಿಗೆ ಕನಿಷ್ಟ ವೇತನ ಜಾರಿ ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಅಲ್ಲದೇ, ಬಿಸಿಯೂಟ ಪೂರೈಕೆಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸಲು ಮುಂದಾಗಿದ್ದು, ಇದರಿಂದಾಗಿ ಅಡುಗೆ ತಯಾರಕರು ಬೀದಿಗೆ ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ. ಈ ಕೂಡಲೇ ಪ್ರಸ್ತಾವನೆಯನ್ನು ಕೈ ಬಿಡುವಂತೆ ಪ್ರತಿಭಟನಾಕಾರರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ABOUT THE AUTHOR

...view details