ಕರ್ನಾಟಕ

karnataka

ETV Bharat / state

ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಸಿದ್ರೆ ಕಠಿಣ ಕ್ರಮ.. ಸಚಿವ ಬೈರತಿ ಬಸವರಾಜ್ - ದಾವಣಗೆರೆ ಸುದ್ದಿ

ಬಿಜೆಪಿ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಹೈಕಮಾಂಡ್ ನಿರ್ಧಾರವನ್ನು ಎಲ್ಲರೂ ಸ್ವಾಗತಿಸಿದ್ದಾರೆ. ಪಕ್ಷದ ವರಿಷ್ಠರು ರಾಜ್ಯಸಭೆಗೆ ಸ್ಪರ್ಧಿಸಲು ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ನೀಡಿದ್ದಾರೆ.

bairathi basavaraj
ಸಚಿವ ಬೈರತಿ ಬಸವರಾಜ್

By

Published : Jun 9, 2020, 8:14 PM IST

ಹರಿಹರ (ದಾವಣಗೆರೆ) :ತುಂಗಭದ್ರಾ ನದಿಯಲ್ಲಿ ಅಕ್ರಮ ಮರಳುಗಾರಿಕೆ ಕಂಡು ಬಂದರೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ನಗರಾಭಿವೃದ್ದಿ ಸಚಿವ ಬೈರತಿ ಬಸವರಾಜ್ ಹೇಳಿದರು.

ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಪೀಠದಲ್ಲಿ ಮಂಗಳವಾರ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಹೊಸ ಮರಳು ನೀತಿ ಜಾರಿಗೆ ತಂದಿದೆ. ಈ ನೀತಿಯನ್ವಯ, ಪರವಾನಗಿ ಪಡೆದ ಗುತ್ತಿಗೆದಾರನಿಗೆ ಮರಳು ಸಾಗಾಣಿಕೆ ಮಾಡಲು ಅವಕಾಶ ನೀಡಲಾಗಿದೆ ಎಂದರು. ಹೊಸ ಮರಳು ನೀತಿಯ ಪ್ರಕಾರ, ಬೆಳಗ್ಗೆ 8 ರಿಂದ ಸಂಜೆ 6ರವರೆಗೆ ಮರಳು ಸಾಗಾಣಿಕೆಗೆ ಅವಕಾಶ ಕಲ್ಪಿಸಲಾಗಿದೆ. ಆದರೆ, ರಾತ್ರಿ ಸಮಯದಲ್ಲಿ ಅಕ್ರಮ ಮರಳು ಸಾಗಾಣಿಕೆ ಕಂಡು ಬಂದ್ರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ತಾಲೂಕಿನಲ್ಲಿ ಉಳಿದಿರುವ ಹೊರ ರಾಜ್ಯದ ವಲಸೆ ಕಾರ್ಮಿಕರನ್ನು ಅವರ ಸ್ವಗ್ರಾಮಕ್ಕೆ ಕಳುಹಿಸಲು ಕ್ರಮಕೈಗೊಳ್ಳುವ ಬಗ್ಗೆ ಗಮನಕ್ಕೆ ತಂದಾಗ, ಸೇವಾಸಿಂಧು ಮೂಲಕ ನೋಂದಣಿ ಮಾಡಿಸಿದವರಿಗೆ ಆದ್ಯತೆಯ ಮೇರೆಗೆ ವ್ಯವಸ್ಥೆ ಮಾಡಲಾಗಿದೆ. ಇನ್ನೂ ಇಲ್ಲಿಯೇ ಉಳಿದಿರುವ ವಲಸೆ ಕಾರ್ಮಿಕರು ತಕ್ಷಣ ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡುವಂತೆ ಸೂಚಿಸಿದರು.

ಕೊಮಾರನಹಳ್ಳಿಯ ಗುಡ್ಡದಲ್ಲಿ ಉಳುಮೆಯ ಹೆಸರಿನಲ್ಲಿ ಕೆಲವರು ಪರಿಸರ ನಾಶಕ್ಕೆ ಮುಂದಾಗಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಉಳಿಮೆಗೆ ಮಾತ್ರ ಅವಕಾಶವಿದೆ. ಆದರೆ, ಪರಿಸರಕ್ಕೆ ಧಕ್ಕೆ ಮಾಡುವಂತಿಲ್ಲ, ಸಂಬಂಧಪಟ್ಟ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸುತ್ತೇನೆ ಎಂದರು. ಬಿಜೆಪಿ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಹೈಕಮಾಂಡ್ ನಿರ್ಧಾರವನ್ನು ಎಲ್ಲರೂ ಸ್ವಾಗತಿಸಿದ್ದಾರೆ. ಪಕ್ಷದ ವರಿಷ್ಠರು ರಾಜ್ಯಸಭೆಗೆ ಸ್ಪರ್ಧಿಸಲು ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ನೀಡಿದ್ದಾರೆ ಎಂದರು.

ABOUT THE AUTHOR

...view details