ದಾವಣಗೆರೆ: ಇನ್ನೂ ಒಂದು ವಾರ ಕಾಲ ಲಾಕ್ಡೌನ್ ವಿಸ್ತರಣೆ ಮಾಡಬೇಕು ಎಂದು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಸಿಎಂ ಯಡಿಯೂರಪ್ಪಗೆ ಮನವಿ ಮಾಡಿದರು.
ಇನ್ನೊಂದು ವಾರ ಲಾಕ್ಡೌನ್ ವಿಸ್ತರಣೆಯಾಗಲಿ; ಬೈರತಿ ಬಸವರಾಜ್ - minister bairathi basavraj
ಜೂನ್ 7 ರಿಂದ 15 ರವರೆಗೆ ಲಾಕ್ಡೌನ್ ವಿಸ್ತರಣೆ ಮಾಡುವಂತೆ ಸಚಿವ ಬೈರತಿ ಬಸವರಾಜ್ ಮುಖ್ಯಮಂತ್ರಿ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆಯ ಕೋವಿಡ್ ಕೇರ್ ಸೆಂಟರ್ನಲ್ಲಿ ಮಾತನಾಡಿದ ಅವರು, ಜೂನ್ 7 ರಿಂದ 15ರ ವರೆಗೆ ಲಾಕ್ಡೌನ್ ವಿಸ್ತರಣೆ ಮಾಡಿದ್ರೆ ಅನುಕೂಲವಾಗುತ್ತೆ ಎಂದು ನಾನು ದಾವಣಗೆರೆಯ ಎಲ್ಲ ಶಾಸಕರ ಪರವಾಗಿ ಮನವಿ ಮಾಡ್ತಿದ್ದೇನೆ ಎಂದರು. ಲಾಕ್ಡೌನ್ ವಿಸ್ತರಣೆ ಮಾಡಿ, ಎಲ್ಲ ಸಚಿವರ, ಶಾಸಕರ ಅಭಿಪ್ರಾಯ ಇದೇ ಆಗಿದೆ. ಈ ಬಗ್ಗೆ ಸಿಎಂ ಅಂತಿಮ ನಿರ್ಧಾರ ಕೈಗೊಳ್ಳಲಿ ಎಂದು ತಿಳಿಸಿದರು.
ಇನ್ನು ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ಬೈರತಿ, ಇನ್ನೂ ಎರಡು ವರ್ಷ ಯಡಿಯೂರಪ್ಪ ಸಿಎಂ ಆಗಿ ಮುಂದುವರೆಯುತ್ತಾರೆ, ಅವರ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸುತ್ತೇವೆ ಎಂದು ತಿಳಿಸಿದರು.