ಕರ್ನಾಟಕ

karnataka

ETV Bharat / state

ರಾಜ್ಯಸಭಾ ಟಿಕೆಟ್ ಹಂಚಿಕೆಯಲ್ಲಿ ಯಾರನ್ನೂ ಕಡೆಗಣಿಸಿಲ್ಲ:  ಸಚಿವ ಬೈರತಿ ಬಸವರಾಜ್ - ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ರಾಜ್ಯದ ನಾಯಕರ ವಿಶ್ವಾಸಕ್ಕೆ ತೆಗೆದುಕೊಂಡು ಹೈ ಕಮಾಂಡ್ ಪಕ್ಷದ ಕಾರ್ಯಕರ್ತರಿಗೆ ರಾಜ್ಯಸಭಾ ಟಿಕೆಟ್ ನೀಡಿದೆ.‌ ಯಾರನ್ನೂ ಕಡೆಗಣಿಸಿಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ತಿಳಿಸಿದ್ದಾರೆ.

Minister Bairati Basavaraj
ಸಚಿವ ಬೈರತಿ ಬಸವರಾಜ್

By

Published : Jun 9, 2020, 4:02 PM IST

ದಾವಣಗೆರೆ:ರಾಜ್ಯಸಭಾ ಟಿಕೆಟ್ ಹಂಚಿಕೆ ವಿಚಾರದಲ್ಲಿ ಹೈ ಕಮಾಂಡ್ ತೆಗೆದುಕೊಂಡ ನಿರ್ಧಾರಕ್ಕೆ ಎಲ್ಲರೂ ಬದ್ಧರಿದ್ದೇವೆ. ಯಾವ ಬಂಡಾಯವೂ ಇಲ್ಲ ಅಸಮಾಧಾನವೂ ಇಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಹೇಳಿದರು.

ನಗರದ ಸರ್ಕ್ಯೂಟ್ ಹೌಸ್​​​​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ರಾಜ್ಯದ ನಾಯಕರ ವಿಶ್ವಾಸಕ್ಕೆ ತೆಗೆದುಕೊಂಡು ಹೈ ಕಮಾಂಡ್ ಪಕ್ಷದ ಕಾರ್ಯಕರ್ತರಿಗೆ ಟಿಕೆಟ್ ನೀಡಿದೆ.‌ ಯಾರನ್ನೂ ಕಡೆಗಣಿಸಿಲ್ಲ ಎಂದು ತಿಳಿಸಿದರು.

ಸಚಿವ ಬೈರತಿ ಬಸವರಾಜ್

ರಮೇಶ್ ಕತ್ತಿ, ಪ್ರಕಾಶ್ ಶೆಟ್ಟಿ ಹಾಗೂ ಪ್ರಭಾಕರ್ ಕೋರೆಯವರು ಟಿಕೆಟ್ ಕೇಳಿದ್ದರು. ಕೋರೆ ಅವರ ಜೊತೆ ಫೋನ್​​​​ನಲ್ಲಿ ಮಾತನಾಡಿದ್ದೇನೆ. ಅಸಮಾಧಾನ ಇಲ್ಲ ಎಂದು ಅವರೇ ಹೇಳಿದ್ದಾರೆ ಎಂದರು. ಇನ್ನು ಎಲ್ಲರಿಗೂ ಆಸೆ ಇರುತ್ತೆ. ಆದರೆ ವ್ಯಕ್ತಿಗಿಂತ ಪಕ್ಷ ದೊಡ್ಡದು ಎಂದು ಅವರು ಹೇಳಿದರು.

ABOUT THE AUTHOR

...view details