ದಾವಣಗೆರೆ: ನಾವು ಹಿಂದುಳಿದವರ ಜಪ ಮಾಡುತ್ತಿಲ್ಲ, ಮೇಲಾಗಿ ಆ ವರ್ಗಗಳ ಕಲ್ಯಾಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಎಂದು ದಾವಣಗೆರೆ ಜಿಲ್ಲಾ ಉಸ್ತುವಾರಿ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲವರು ತಾವೇ ಹಿಂದುಳಿದ ವರ್ಗಗಳ ನಾಯಕ ಎಂದು ಬಿಂಬಿಸಿಕೊಂಡು ಮತ ಪಡೆಯುತ್ತಾರೆ. ಆದ್ರೆ ಅವರ ಕಲ್ಯಾಣಕ್ಕೆ ಯಾವುದೇ ಕಾರ್ಯಕ್ರಮ ರೂಪಿಸಿಲ್ಲ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ಮಾಜಿ ಸಚಿವ ಜನಾರ್ದನ್ ರೆಡ್ಡಿ ಬಿಜೆಪಿ ಪಕ್ಷದಿಂದ ಅಸಮಾಧಾನ ಹಿನ್ನೆಲೆ ಮಾತನಾಡಿದ ಅವರು, ಜನಾರ್ದನ ರೆಡ್ಡಿ ಅವರು ಬಿಜೆಪಿ ಬಿಟ್ಟು ಹೋಗುವುದಾದ್ರೆ ಹೋಗಲಿ, ಏನು ಮಾಡುವುದಕ್ಕೆ ಆಗಲ್ಲ. ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಯಾರೂ ಹೋಗಲ್ಲ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಸಾಕಷ್ಟು ಜನ ನಮ್ಮ ಪಕ್ಷಕ್ಕೆ ಸೇರುತ್ತಾರೆ. ಬಿಜೆಪಿ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ ಎಂದರು.
ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಸರ್ಕಾರ ಶ್ರಮಿಸುತ್ತಿದೆ.. ಸಚಿವ ಭೈರತಿ ಬಸವರಾಜ್ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಚೆಕ್ ಮೂಲಕ 1.34 ಕೋಟಿ ಹಣ ಪಡೆದಿದ್ದಾರೆ ಎಂದು ಬಿಜೆಪಿ ವಕ್ತಾರ ಎನ್ ಆರ್ ರಮೇಶ್ ಅವರು ಆರೋಪಿಸಿದ್ದಾರೆ. ಈ ವಿಚಾರವನ್ನು ನಾನು ಮಾಧ್ಯಮದಲ್ಲಿ ನೋಡಿದ್ದೇನೆ. ಸಿದ್ದರಾಮಯ್ಯ ಚೆಕ್ ಮೂಲಕ ಹಣ ಪಡೆದಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಇದರಿಂದ ಲೋಕಾಯುಕ್ತಕ್ಕೆ ದೂರು ಸಲ್ಲಿಸುವ ಮಾತನ್ನು ರಮೇಶ್ ಅವರು ಹೇಳಿದ್ದಾರೆ. ಈ ವಿಚಾರವನ್ನು ನಮ್ಮ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ ಎಂದು ಕೂಡ ಹೇಳಿದ್ದಾರೆ. ಸಿಎಂ ಅವರು ಈ ಬಗ್ಗೆ ಮುಂದಿನ ನಿರ್ಧಾರ ಮಾಡಲಿದ್ದಾರೆ ಸಚಿವರು ಹೇಳಿದರು.
ಓದಿ:ಬಿಜೆಪಿಯವರು ಸುಳ್ಳಿನ ಫ್ಯಾಕ್ಟರಿಯಾದರೆ ಆರ್ಎಸ್ಎಸ್ ಅದರ ರೂವಾರಿ: ಸಿದ್ದರಾಮಯ್ಯ ವಾಗ್ದಾಳಿ