ಕರ್ನಾಟಕ

karnataka

ETV Bharat / state

ಸಿಎಂ ಯಾವ ಆ್ಯಂಗಲ್​ನಲ್ಲಿ ರಾಜೀನಾಮೆ ಬಗ್ಗೆ ಹೇಳಿದ್ದಾರೋ ಗೊತ್ತಿಲ್ಲ: ಭೈರತಿ ಬಸವರಾಜ್ - ಬಿಜೆಪಿ ನಾಯಕತ್ವ ಬದಲಾವಣೆ

ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ಕೊಡಲು ಸಿದ್ದ ಎಂದಿರುವ ಸಿಎಂ ಬಿಎಸ್​ವೈ ಹೇಳಿಕೆ ಬಗ್ಗೆ ಸಚಿವ ಭೈರತಿ ಬಸವರಾಜ್ ಪ್ರತಿಕ್ರಿಯಿಸಿದ್ದು, ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

Minister Bhairati Basavaraj
ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜ್

By

Published : Jun 8, 2021, 12:13 PM IST

ದಾವಣಗೆರೆ: ಯಡಿಯೂರಪ್ಪನವರು ರಾಜೀನಾಮೆ ನೀಡಲು ಸಿದ್ದ ಎಂದು ಯಾವ ಆ್ಯಂಗಲ್​ನಲ್ಲಿ ಹೇಳಿದ್ದಾರೊ ಗೊತ್ತಿಲ್ಲ. ಮುಂದಿನ ಎರಡು ವರ್ಷ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜ್ ಹೇಳಿದರು.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯನ್ನು ಯಡಿಯೂರಪ್ಪನವರ ನೇತೃತ್ವದಲ್ಲೇ ಎದುರಿಸುತ್ತೇವೆ. ನಾನು ನಿನ್ನೆ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿದ್ದೇನೆ. ನಾವೆಲ್ಲಾ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಎಲ್ಲಾ ಸಚಿವರು ಶಾಸಕರು ಸಿಎಂ ಬೆಂಬಲಕ್ಕಿದ್ದಾರೆ ಎಂದರು.

ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜ್

ರೇಣುಕಾಚಾರ್ಯರ ಸಹಿ ಸಂಗ್ರಹದ ಕುರಿತು ಪ್ರತಿಕ್ರಿಯಿಸಿದ ಅವರು, 65 ಶಾಸಕರ ಸಹಿ ಸಂಗ್ರಹಿಸಿದ್ದಾರೆ ಎಂಬ ವಿಷಯವನ್ನು ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದೇನೆ. ಸಹಿ ಸಂಗ್ರಹದ ಪರ, ವಿರೋಧ ಎಂಬವುದೇನು ಇಲ್ಲ. ಎಲ್ಲಾ ಶಾಸಕರು ಸಿಎಂ ಪರ ಇದ್ದಾರೆ. ಕೊರೊನಾ ಕಷ್ಟ ಕಾಲದಲ್ಲಿ ಸಿಎಂ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ಬಸನಗೌಡ ಪಾಟೀಲ್ ಯತ್ನಾಳ್ ಒಬ್ಬರು ಮಾತ್ರ ಕಳೆದ ಎರಡು ವರ್ಷಗಳಿಂದ ಸಿಎಂ ವಿರುದ್ಧ ಅಪಸ್ವರ ಎತ್ತುತ್ತಲೇ ಇದ್ದಾರೆ. ಅವರಿಗೆ ಮಿನಿಸ್ಟರ್ ಆಗಲಿಲ್ಲ ಎಂಬ ಅಸಮಾಧಾನವಿದೆ. ಅದಕ್ಕಾಗಿ ಹಾಗೆ ಮಾತನಾಡುತ್ತಿದ್ದಾರೆ ಎಂದು ಹೇಳುವ ಮೂಲಕ ಶಾಸಕ ಯತ್ನಾಳ್​ಗೆ ಟಾಂಗ್ ನೀಡಿದರು.

ಓದಿ : ಹೈಕಮಾಂಡ್ ಸೂಚಿಸಿದರೆ ತಕ್ಷಣ ರಾಜೀನಾಮೆ: ಸಿಎಂ ಬಿಎಸ್​ವೈ

ABOUT THE AUTHOR

...view details