ದಾವಣಗೆರೆ: ನಟಿ ರಾಗಿಣಿ ಬಂಧನದ ಬಳಿಕ ರಾಜಕಾರಣಿ ಒತ್ತಡ ಹೇರಿದ ಬಗ್ಗೆ ಗೊತ್ತಿಲ್ಲ. ಯಾರು ಒತ್ತಡ ಹೇರಿದ್ದಾರೆಂಬುದು ಅಧಿಕಾರಿಗಳಿಗೆ ಗೊತ್ತಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ.
ರಾಗಿಣಿ ಬಂಧನದ ಬಳಿಕ ರಾಜಕಾರಣಿ ಒತ್ತಡದ ಬಗ್ಗೆ ಗೊತ್ತಿಲ್ಲ: ಭೈರತಿ ಬಸವರಾಜ್
ಸ್ಯಾಂಡಲ್ವುಡ್ ನಟ, ನಟಿಯರು, ರಾಜಕಾರಣಿಗಳ ನಂಟು ಬೆಳಕಿಗೆ ಬರುತ್ತಿರುವುದನ್ನು ಸುದ್ದಿ ಮಾಧ್ಯಮಗಳಲ್ಲಿ ನಾನು ನೋಡಿದ್ದೇನೆ. ಸಿಎಂ ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಅವರು ರಾಗಿಣಿ ಬಿಜೆಪಿ ಸೇರಲು ಬಯಸಿದ್ದ ಬಗ್ಗೆ ಗೊತ್ತಿಲ್ಲ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಸ್ಯಾಂಡಲ್ವುಡ್ ನಟ, ನಟಿಯರು ಹಾಗೂ ರಾಜಕಾರಣಿಗಳು, ಅವರ ಮಕ್ಕಳು ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿರುವ ಕುರಿತಂತೆ ಮಾಹಿತಿ ಇಲ್ಲ. ಸಿಎಂ ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಈ ಬಗ್ಗೆ ಮಾಹಿತಿ ಇರುತ್ತದೆ. ಯಾರೇ ತಪ್ಪು ಮಾಡಿದ್ದರೂ ಸರ್ಕಾರ ಕ್ರಮ ಕೈಗೊಳ್ಳಲಿದೆ. ಇಂತಹ ವಿಷಯದ ಬಗ್ಗೆ ರಾಷ್ಟ್ರೀಯ, ರಾಜ್ಯ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ನಾನು ಉಸ್ತುವಾರಿ ಸಚಿವನಾಗಿ ಜಿಲ್ಲೆಗೆ 26 ಬಾರಿ ಭೇಟಿ ನೀಡಿದ್ದೇನೆ. ಜಿಲ್ಲೆಯ ಅಭಿವೃದ್ಧಿ ಬಗ್ಗೆ ಶಕ್ತಿಮೀರಿ ಪ್ರಯತ್ನಿಸುತ್ತಿದ್ದೇನೆ ಎಂದು ಹೇಳಿದರು.