ದಾವಣಗೆರೆ: ಜಿಲ್ಲಾ ಉಸ್ತುವಾರಿ ಸಚಿವರ ನೇಮಕದಿಂದ ನನಗೆ ಯಾವುದೇ ಬೇಸರ ಇಲ್ಲ. ಜಿಲ್ಲೆಯ ಜನರ ಪ್ರೀತಿ ವಿಶ್ವಾಸವಿದೆ, ಇರುವಷ್ಟು ದಿನ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಪ್ರತಿಕ್ರಿಯಿಸಿದ್ದಾರೆ.
ದಾವಣಗೆರೆಯಲ್ಲಿ ಗಣರಾಜ್ಯೋತ್ಸವದ ಧ್ವಜಾರೋಹಣ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಈ ಜಿಲ್ಲೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ. ನನಗೆ ಬೇರೆ ಜಿಲ್ಲೆ ಬೇಡ, ಪಕ್ಷದಲ್ಲಿ ಎಲ್ಲರೂ ಒಟ್ಟಾಗಿ ಯಾವುದೇ ಭಿನ್ನಾಭಿಪ್ರಾಯ ಇಲ್ಲದೆ ಕಾರ್ಯ ನಿರ್ವಹಿಸುತ್ತೇವೆ. ಬೆಂಗಳೂರು ಅಭಿವೃದ್ಧಿಗೆ ಸಿಎಂ 6 ಸಾವಿರ ಕೋಟಿ ಅನುದಾನ ಘೋಷಣೆ ಮಾಡಿದ್ದಾರೆ. ಅಲ್ಲಿ ಸಿಎಂ ಇದ್ದರೆ ಮಾತ್ರ ಆ ಕಾರ್ಯಕ್ರಮ ಯಶಸ್ವಿಯಾಗುತ್ತದೆ. ಅದ್ದರಿಂದ ನಾವು ಯಾರೂ ಕೂಡ ಬೆಂಗಳೂರು ಉಸ್ತುವಾರಿ ಕೊಡಿ ಎಂದು ಕೇಳಿಲ್ಲ ಎಂದರು.