ದಾವಣಗೆರೆ:ಮಾಜಿ ಸಚಿವ ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ವದಂತಿಗೆ ಜಿಲ್ಲಾ ಉಸ್ತುವಾರಿ ಮತ್ತು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ತೆರೆ ಎಳೆದಿದ್ದಾರೆ.
ಜಿಲ್ಲೆಯ ಚನ್ನಗಿರಿ ತಾಲೂಕಿನ ಕಾಕನೂರುನಲ್ಲಿ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿಯವರು ರಾಜೀನಾಮೆ ನೀಡಲ್ಲ, ಈ ಸಮಸ್ಯೆ ಮುಂದಿನ ದಿನಗಳಲ್ಲಿ ತಿಳಿಯಾಗುತ್ತದೆ. ಅವರು ರಾಜೀನಾಮೆ ನೀಡುತ್ತಾರೆ ಎನ್ನುವುದರ ಬಗ್ಗೆ ನನಗೆ ಸ್ಪಷ್ಟ ಮಾಹಿತಿಯಿಲ್ಲ. ಯಾವ ಕಾರಣಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ ಎಂಬುದು ಸಹ ನನಗೆ ಗೊತ್ತಿಲ್ಲ. ಅವರು ಆ ರೀತಿ ಮಾಡುವುದಿಲ್ಲ, ಅವರೊಂದಿಗೆ ನಾವು ಇರುತ್ತೇವೆ ಎಂದಿದ್ದಾರೆ.