ದಾವಣಗೆರೆ : ಪತ್ನಿ ಹಾಗೂ ಪುತ್ರ ಕಾಂತೇಶ್ ಜೊತೆ ಜಿಲ್ಲೆಯ ಜಗಳೂರು ತಾಲೂಕಿನ ಕಣ್ವಕುಪ್ಪೆ ಮಠಕ್ಕೆ ಭೇಟಿ ನೀಡಿದ ಸಚಿವ ಕೆ.ಎಸ್ ಈಶ್ವರಪ್ಪ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿಗಳ ಆಶೀರ್ವಾದ ಪಡೆದರು. ನಾಯಕತ್ವ ಬದಲಾವಣೆ ಚರ್ಚೆಯ ಸಮಯದಲ್ಲೇ ಈಶ್ವರಪ್ಪ ಮಠಗಳಿಗೆ ಭೇಟಿ ನೀಡುತ್ತಿರುವುದು ವಿಶೇಷವಾಗಿದೆ.
ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಜೊತೆ ಸುಮಾರು ಒಂದು ಗಂಟೆಯ ಕಾಲ ಈಶ್ವರಪ್ಪ ಚರ್ಚೆ ನಡೆಸಿದರು. ಕೇದಾರನಾಥದಲ್ಲಿ ಪ್ರಧಾನಿ ಮೋದಿಯವರಿಗೆ ದೀಕ್ಷೆ ನೀಡಿದ್ದ ಸ್ವಾಮೀಜಿ ಇವರಾಗಿದ್ದು, ರಾಷ್ಟ್ರ ನಾಯಕರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.