ಕರ್ನಾಟಕ

karnataka

ETV Bharat / state

ಪಂಚಮಸಾಲಿ ಮೀಸಲಾತಿ ವಿಚಾರದಲ್ಲಿ ಕೆಲವರದ್ದು ಚೆಸ್ ಆಟ: ಯತ್ನಾಳ್‌ಗೆ ನಿರಾಣಿ ಟಾಂಗ್‌

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ವಿಚಾರವಾಗಿ ಈಗಾಗಲೇ ಸಮೀಕ್ಷೆ ಆರಂಭವಾಗಿದೆ‌ ಎಂದು ಸಚಿವ ಮುರುಗೇಶ ನಿರಾಣಿ ತಿಳಿಸಿದ್ದಾರೆ.

ಸಚಿವ ಮುರಗೇಶ ನಿರಾಣಿ
ಸಚಿವ ಮುರಗೇಶ ನಿರಾಣಿ

By

Published : Apr 24, 2022, 4:54 PM IST

ದಾವಣಗೆರೆ:ಮೀಸಲಾತಿಗಾಗಿ ನಾನು ಬೀದಿಗಿಳಿದು ಹೋರಾಟ ಮಾಡಲು ಸಾಧ್ಯವಿಲ್ಲ. ಸರ್ಕಾರದ ಒಂದು ಅಂಗವಾಗಿ ಹಾಗೂ ಸಚಿವನಾಗಿ ಕೆಲಸ ಮಾಡ್ತಿದ್ದೇನೆ. ನಿರ್ಧಾರ ತೆಗೆದುಕೊಳ್ಳುವ ಸ್ಥಾನದಲ್ಲಿದ್ದೇನೆ ಎಂದು ಸಚಿವ ಮುರುಗೇಶ ನಿರಾಣಿ ಹೇಳಿದರು.


ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಬಳಿ ಇರುವ ಪಂಚಮಸಾಲಿ ಗುರು ಪೀಠದಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ವಿಚಾರವಾಗಿ ಈಗಾಗಲೇ ಸಮೀಕ್ಷೆ ಆರಂಭವಾಗಿದೆ‌. ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ ಸರ್ಕಾರಕ್ಕೆ ವರದಿ ನೀಡಲಿದ್ದಾರೆ. ಈ ವರದಿ ಬಂದ ಬಳಿಕ ಸಿಎಂ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು.

ಮೀಸಲಾತಿ ವಿಚಾರದಲ್ಲಿ ಒಬ್ಬೊಬ್ಬ ನಾಯಕರು ಒಂದೊಂದು ರೀತಿಯಲ್ಲಿ ಹೋರಾಟದಲ್ಲಿ ತೊಡಗಿದ್ದಾರೆ. ಕೆಲವರು ಕೋ-ಕೋ, ಕಬಡ್ಡಿ ಆಡುತ್ತಿದ್ದಾರೆ. ಇನ್ನು ಕೆಲವರು ಚೆಸ್ ಆಡುತ್ತಿದ್ದಾರೆ ಎಂದು ಶಾಸಕ ಯತ್ನಾಳ್​ಗೆ ಟಾಂಗ್ ಕೊಟ್ಟರು. ಸದನದಲ್ಲಿ ಮೀಸಲಾತಿ ವಿಚಾರದಲ್ಲಿ ಯತ್ನಾಳ್ ಮಾತಾಡಿದಂತೆ ನಾನು ಮಾತಾಡಲು ಬರಲ್ಲ. ಎಲ್ಲ ಲಿಂಗಾಯತರು ಒಂದಾಗಬೇಕು ಎಂಬುದು ನಮ್ಮ ಆಶಯ ಎಂದರು.‌

ಪಿಎಸ್​ಐ ನೇಮಕಾತಿ ಗೋಲ್​ಮಾಲ್​ ವಿಚಾರದಲ್ಲಿ ಸರ್ಕಾರ ಸ್ಪಷ್ಟವಾಗಿದ್ದು, ಯಾವುದೇ ಹಸ್ತಕ್ಷೇಪವಿಲ್ಲದೇ ತನಿಖೆ ನಡೆಯುತ್ತಿದೆ. ಇದರಲ್ಲಿ ಯಾವುದೇ ಪಕ್ಷ, ಯಾವುದೇ ಜಾತಿ ವ್ಯಕ್ತಿಗಳಿದ್ದರೂ ಅವರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಇದನ್ನೂ ಓದಿ:ಹುಬ್ಬಳ್ಳಿ ಗಲಭೆಯನ್ನು ನಾವು ಸಾಮಾನ್ಯ ಗಲಭೆ‌ ಎಂದು ಪರಿಗಣಿಸಿಲ್ಲ.. ಇದರ ಹಿಂದೆ ಷಡ್ಯಂತ್ರವಿದೆ : ಸಿಎಂ ಬೊಮ್ಮಾಯಿ

For All Latest Updates

TAGGED:

ABOUT THE AUTHOR

...view details