ದಾವಣಗೆರೆ:ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ಕಾರಣರಾದವರಿಗೆ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದೇವೆ ಎಂದು ಸಹಕಾರ ಸಚಿವ ಎಚ್.ಟಿ. ಸೋಮಶೇಖರ್ ತಿಳಿಸಿದರು.
ಎಂಟಿಬಿ ಅಷ್ಟೇ ಅಲ್ಲ ನಮ್ಮ ಜೊತೆ ಬಂದವರಿಗೂ MLC ಮಾಡುವಂತೆ ಕೇಳಿದ್ದೇವೆ: ಸಚಿವ ಸೋಮಶೇಖರ್ - ಸೋತ ಶಾಸಕರಿಗೆ ಎಂಎಲ್ಸಿ ಸ್ಥಾನ ಕೊಡುವಂತೆ ಮನವಿ
ಉಪಚುನಾವಣೆಯಲ್ಲಿ ಸೋತ ಎಂಟಿಬಿ ನಾಗರಾಜ್, ವಿಶ್ವನಾಥ್, ಶಂಕರ್ ಅವರನ್ನು ಎಂಎಲ್ಸಿ ಮಾಡುವಂತೆ ಸಿಎಂ ಬಳಿ ಕೇಳಿಕೊಂಡಿದ್ದೇವೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮದವರ ಜೊತೆ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಸೋತ ಎಂಟಿಬಿ ನಾಗರಾಜ್, ವಿಶ್ವನಾಥ್, ಶಂಕರ್ ಅವರನ್ನು ಎಂಎಲ್ಸಿ ಮಾಡುವಂತೆ ಸಿಎಂ ಬಳಿ ಕೇಳಿಕೊಂಡಿದ್ದೇವೆ ಎಂದು ಹೇಳಿದರು.
ಕರ್ನಾಟಕ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರುವ ಸರ್ಕಾರದ ನಿರ್ಧಾರದ ಬಗ್ಗೆ ಮಾತನಾಡಿದ ಅವರು, ಈ ಹಿಂದೆ ಇದ್ದ ಕಾಯ್ದೆ ಬಗ್ಗೆ ಜನರಿಂದ ದೂರು ಕೇಳಿ ಬಂದಿದ್ದವು. ಸಹಾಯಕ ಆಯುಕ್ತರು ಇದೊಂದು ದಂಧೆಯನ್ನಾಗಿ ಮಾಡಿಕೊಂಡಿದ್ದರು. ಈ ಬಗ್ಗೆ ಚರ್ಚಿಸಿ ಕಾಯ್ದೆಗೆ ತಿದ್ದುಪಡಿ ತರಲು ತೀರ್ಮಾನಿಸಲಾಗಿದೆ. ಐದು ಗುಂಟೆ ಜಮೀನು ಖರೀದಿಸಿದರೆ ಎರಡರಿಂದ ಮೂರು ತಿಂಗಳಲ್ಲಿ ನೋಟಿಸ್ ನೀಡಲಾಗುತಿತ್ತು. ಈಗ ಕಾಯ್ದೆಗೆ ತಿದ್ದುಪಡಿ ತರುವುದರಿಂದ ಯಾರಿಗೂ ತೊಂದರೆಯಾಗುವುದಿಲ್ಲ ಎಂದು ಅಭಿಪ್ರಾಯಪಟ್ಟರು.