ದಾವಣಗೆರೆ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಹಳ್ಳಕೊಳ್ಳಗಳು ಮೈದುಂಬಿ ಹರಿಯುತ್ತಿವೆ. ಹೊನ್ನಾಳಿ ನ್ಯಾಮತಿ ತಾಲೂಕುಗಳಲ್ಲಿ ಅತಿ ಹೆಚ್ಚು ಮಳೆಯಾಗಿದ್ದರಿಂದ ಈ ಭಾಗದಲ್ಲಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಅನೇಕ ಬೆಳೆಗಳು ಹಾನಿಯಾಗಿದೆ.
ಜಿಲ್ಲೆಯ ನ್ಯಾಮತಿ ತಾಲೂಕಿನ ಗಂಜೇನಹಳ್ಳಿರುವ ಹಿರೇಹಳ್ಳ ತುಂಬಿ ಹರಿಯುತ್ತಿರುವುದರಿಂದ, ಸಾಲಬಾಳು-ಗಂಜೇನಹಳ್ಳಿ ಸಂಪರ್ಕಿಸುವ ರಸ್ತೆಯ ಮೇಲೆ ನೀರು ಹರಿಯುತ್ತಿರುವುದ್ದರಿಂದ ಸಂಪರ್ಕ ಕಡಿತಗೊಂಡಿದೆ. ನೀರು ಹೊಲಗಳಿಗೆ ನುಗ್ಗಿದ್ದು, ಬೆಳೆ ಹಾನಿಯಾಗಿದೆ. ಪ್ರತಿ ವರ್ಷ ಇದೇ ಸಮಸ್ಯೆ ಎದುರಾಗುತ್ತಿದ್ದರಿಂದ ಶಾಸಕ ಎಂಪಿ ರೇಣುಕಾಚಾರ್ಯ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.