ದಾವಣಗೆರೆ :ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಇಬ್ಬರು ಬಡ ವಿದ್ಯಾರ್ಥಿಗಳಿಗೆ ಮೊಬೈಲ್ ನೀಡಿ ಮಾನವೀಯತೆ ಮೆರೆದಿದ್ದಾರೆ. ಹೊನ್ನಾಳಿ ಪಟ್ಟಣದಲ್ಲಿರುವ ತಮ್ಮ ನಿವಾಸದಲ್ಲಿ ಟಿ.ಗೋಪಗೊಂಡನಹಳ್ಳಿ ಗ್ರಾಮದ ಬಿಂದು, ಸುಂಕದಕಟ್ಟೆ ಗ್ರಾಮದ ನರ್ಮದಾಗೆ ಮೊಬೈಲ್ ನೀಡಿ ಒಳ್ಳೆಯ ವಿದ್ಯಾಭ್ಯಾಸ ಮಾಡುವಂತೆ ತಿಳಿ ಹೇಳಿದ್ದಾರೆ.
ಬಡ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್ ಫೋನ್ ನೀಡಿ ಆಸರೆಯಾದ ಶಾಸಕ ಎಂ ಪಿ ರೇಣುಕಾಚಾರ್ಯ - ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ
ಶಾಸಕ ರೇಣುಕಾಚಾರ್ಯ ವಿದ್ಯಾರ್ಥಿನಿಯರಿಗೆ ಮೊಬೈಲ್ ಕೊಡಿಸುವುದಾಗಿ ಭರವಸೆ ನೀಡಿದ್ದರು. ಕೊಟ್ಟ ಮಾತಿನಂತೆ ಇಂದು ವಿದ್ಯಾರ್ಥಿನಿಯರಿಗೆ ಮೊಬೈಲ್ ನೀಡಿ ವಿದ್ಯಾಭ್ಯಾಸಕ್ಕೆ ಸಹಾಯ ಮಾಡಿದ್ದಾರೆ..
ಬಡ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್ ಫೋನ್ ನೀಡಿದ ಶಾಸಕ ರೇಣುಕಾಚಾರ್ಯ
ಬಿಂದು ಹಾಗೂ ನರ್ಮದಾ ಇಬ್ಬರು ವಿದ್ಯಾರ್ಥಿನಿಯರ ಮನೆಯಲ್ಲಿ ಬಡತನ ಇರುವುದರಿಂದ ಸ್ಮಾರ್ಟ್ ಫೋನ್ ಇಲ್ಲದೇ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ ಎಂದು ಶಾಸಕರ ಬಳಿ ವಿದ್ಯಾರ್ಥಿನಿಯರು ಅಳಲು ತೋಡಿಕೊಂಡಿದ್ದರಂತೆ.
ಇದಕ್ಕೆ ಶಾಸಕ ರೇಣುಕಾಚಾರ್ಯ ವಿದ್ಯಾರ್ಥಿನಿಯರಿಗೆ ಮೊಬೈಲ್ ಕೊಡಿಸುವುದಾಗಿ ಭರವಸೆ ನೀಡಿದ್ದರು. ಕೊಟ್ಟ ಮಾತಿನಂತೆ ಇಂದು ವಿದ್ಯಾರ್ಥಿನಿಯರಿಗೆ ಮೊಬೈಲ್ ನೀಡಿ ವಿದ್ಯಾಭ್ಯಾಸಕ್ಕೆ ಸಹಾಯ ಮಾಡಿದ್ದಾರೆ.
Last Updated : Oct 11, 2021, 4:28 PM IST
TAGGED:
MLA M P Renukacharya