ದಾವಣಗೆರೆ: 'ಕುಮಾರಸ್ವಾಮಿ ಒಬ್ಬ ಅರೆಹುಚ್ಚ' ಎಂದು ಶಾಸಕ ಎಂ ಪಿ ರೇಣುಕಾಚಾರ್ಯ ಅವರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಜಿಲ್ಲೆಯ ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮದಲ್ಲಿ ಪ್ರತಿಕ್ರಿಯಿಸಿದ ಅವರು, ಆರ್ಎಸ್ಎಸ್ ಬಗ್ಗೆ ಮಾತನಾಡಿದವರು ಸರ್ವನಾಶ ಆಗ್ತಾರೆ. ಆರ್ಎಸ್ಎಸ್ ಹಿಂದುತ್ವ, ಸಂಸ್ಕೃತಿಯನ್ನು ಉಳಿಸಿಕೊಂಡು ಹೋಗುತ್ತಿದೆ. ಆರ್ಎಸ್ಎಸ್ ಸಿದ್ಧಾಂತಗಳನ್ನು ಪಾಲಿಸಿದಾಗ ಮಾತ್ರ ಅದರ ಮಹತ್ವ ತಿಳಿಯುತ್ತದೆ ಎಂದು ಕುಮಾರಸ್ವಾಮಿಯವರಿಗೆ ಸಲಹೆ ನೀಡಿದರು.