ದಾವಣಗೆರೆ :ಅಗ್ನಿ ಅವಘಡದಲ್ಲಿ ಮೂರು ಅಂಗಡಿಗಳು ಸುಟ್ಟು ಭಸ್ಮವಾಗಿದ್ದು, ಲಕ್ಷಾಂತರ ಮೌಲ್ಯದ ಗುಜರಿ ವಸ್ತುಗಳು ಸುಟ್ಟು ಕರಕಲಾಗಿವೆ. ಘಟನೆ ಬೆನ್ನಲ್ಲೆ ಜಗಳೂರು ಶಾಸಕ ಎಸ್ ವಿ ರಾಮಚಂದ್ರಪ್ಪ ಭೇಟಿ ನೀಡಿ ಅಂಗಡಿ ಮಾಲೀಕರಿಗೆ ತಲಾ ₹50 ಸಾವಿರ ಸಹಾಯಧನ ನೀಡಿ ಸಾಂತ್ವನ ಹೇಳಿದರು.
ಜಿಲ್ಲೆಯ ಜಗಳೂರು ಪಟ್ಟಣದ ಕೆರೆ ಪಕ್ಕದಲ್ಲಿರುವ ಅಂಗಡಿಗಳಲ್ಲಿ ಕಳೆದ ತಡರಾತ್ರಿ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದ್ದವು. ಅಂಗಡಿಗಳು ಜಬೀವುಲ್, ಲುಕ್ಮನ್ ಸಾಬ್, ವೀರಣ್ಣ ಎಂಬುವರಿಗೆ ಸೇರಿದ್ದವು ಎಂದು ತಿಳಿದು ಬಂದಿದೆ.