ದಾವಣಗೆರೆ :ಅಪಘಾತದಲ್ಲಿ ಗಾಯಗೊಂಡ ಯುವಕನನ್ನು ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಜಿಲ್ಲೆಯ ನ್ಯಾಮತಿ ತಾಲೂಕಿನ ಟಿ ಜಿ ಹಳ್ಳಿ ಬಳಿ ಬೈಕ್ ಅಪಘಾತಕ್ಕೀಡಾಗಿತ್ತು. ಅದೇ ಮಾರ್ಗವಾಗಿ ಸಂಚರಿಸುತ್ತಿದ್ದ ಶಾಸಕ ರೇಣುಕಾಚಾರ್ಯ, ಅಪಘಾತದಲ್ಲಿ ಗಾಯಗೊಂಡ ಯುವಕನನ್ನು ತಮ್ಮ ಬೆಂಗಾವಲು ವಾಹನದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋದರು.
ಅಪಘಾತದಲ್ಲಿ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ಸೇರಿಸಿದ ಶಾಸಕ ರೇಣುಕಾಚಾರ್ಯ - Etv Bharat Kannada
ದಾವಣಗೆರೆ ಜಲ್ಲೆಯಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನನ್ನು ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ತಮ್ಮ ಬೆಂಗಾವಲು ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಶಾಸಕರ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
ಅಪಘಾತದಲ್ಲಿ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ಸೇರಿಸಿದ ಶಾಸಕ ರೇಣುಕಾಚಾರ್ಯ
ಅಪಘಾತದಲ್ಲಿ ಯುವಕನ ತಲೆಗೆ ಪೆಟ್ಟು ಬಿದ್ದಿದ್ದರಿಂದ ಯುವಕನ ತಾಯಿ ಗಾಬರಿಗೊಂಡಿದ್ದು, ಶಾಸಕರು ಯುವಕನ ತಾಯಿಯನ್ನು ಸಂತೈಸಿದರು. ಇನ್ನು ಶಾಸಕರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
ಓದಿ :ನಿಂತ ಟ್ರಕ್ಗೆ ಕಾರು ಡಿಕ್ಕಿ: ತಿರುಪತಿಗೆ ತೆರಳುತ್ತಿದ್ದ ಐವರ ಸಾವು!