ದಾವಣಗೆರೆ: ದೇಶಾದ್ಯಂತ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದು ಕೊಳ್ಳಲು ಸರ್ಕಾರ ಮನವಿ ಮಾಡಿದೆ. ಆದರೆ, ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ನಿಯಮ ಉಲ್ಲಂಘಿಸಿದ್ದು, ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಲಾಕ್ಡೌನ್ ಉಲ್ಲಂಘಿಸಿದರಾ ರೇಣುಕಾಚಾರ್ಯ...?
ಕೊರೊನಾ ಸೋಂಕು ತಡೆಗೆ ದೇಶಾದ್ಯಂತ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಆದರೆ, ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ನಿಯಮ ಉಲ್ಲಂಘಿಸಿರುವುದು ಜನರ ಕೆಂಗಣ್ಣಿಗೆ ಗುರಿಯಾಗಿದೆ.
ಲಾಕ್ ಡೌನ್ ಉಲ್ಲಂಘಿಸಿದ ರೇಣುಕಾಚಾರ್ಯ...?
ಬಿಜೆಪಿ ಸಂಸ್ಥಾಪನಾ ದಿನಾಚರಣೆ ವೇಳೆ ಶಾಸಕ ರೇಣುಕಾಚಾರ್ಯ ನಿಯಮ ಉಲ್ಲಂಘಿಸಿದ್ದು, ಜನರ ಕೆಂಗಣ್ಣಿಗೆ ಗುರಿಯಾಗಿದೆ. ಅದೇ ರೀತಿ ನಗರದ 18ನೇ ವಾರ್ಡ್ನ ಪಾತಾಳ ಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ದಿನಸಿ ಕಿಟ್ ಮತ್ತು ಮಾಸ್ಕ್ಗಳ ವಿತರಣೆ ಮಾಡುವಾಗಲು ಜನರು ಯಾವುದೇ ನಿಯಮ ಪಾಲಿಸದಿರುವುದು ಕಂಡು ಬಂದಿದೆ.
ಈ ವೇಳೆ, ಮಹಾನಗರ ಪಾಲಿಕೆಯ ಮೇಯರ್ ಅಜಯ್ ಕುಮಾರ್, ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ್ ಸೇರಿದಂತೆ ಬಿಜೆಪಿ ನಾಯಕರು ಇದ್ದರು.