ದಾವಣಗೆರೆ: ಕಾರ್ಯಕ್ರಮವೊಂದರಲ್ಲಿ ಅಸ್ವಸ್ಥಗೊಂಡ ವಿದ್ಯಾರ್ಥಿನಿಯನ್ನು ಶಾಸಕ ಎಂ.ಪಿ.ರೇಣುಕಾಚಾರ್ಯ ತಮ್ಮ ಸರ್ಕಾರಿ ವಾಹನದಲ್ಲೇ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿದರು.
ಹೊನ್ನಾಳಿ ತಾಲೂಕಿನ ಅರಬಗಟ್ಟೆ ಗ್ರಾಮದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿಕಡೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದರ ಅಂಗವಾಗಿ ಶಾಲೆಯೊಂದರಲ್ಲಿ ಸಂಜೆ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ 9ನೇ ತರಗತಿಯ ಸಹನಾ ಎಂಬ ವಿದ್ಯಾರ್ಥಿನಿ ಅಸ್ವಸ್ಥಗೊಂಡಿದ್ದಾಳೆ.