ದಾವಣಗೆರೆ: ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಬಳಿ ಚರ್ಚೆ ಮಾಡದೆ ಹಾದಿ ಬೀದಿಯಲ್ಲಿ ಪ್ರತಿಭಟನೆ ಮಾಡಿದರೆ ನಿಮ್ಮ ಸಮಸ್ಯೆ ಬಗೆಹರಿಯುತ್ತಾ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎಂ.ಪಿ.ರೇಣುಕಾಚಾರ್ಯ ಪ್ರತಿಭಟನಾನಿರತ ಸಾರಿಗೆ ನೌಕರರಿಗೆ ಪ್ರಶ್ನಿಸಿದರು.
ದಾವಣಗೆರೆಯಲ್ಲಿ ಮಾತನಾಡಿದ ಅವರು, ಸಾರಿಗೆ ನೌಕರರ ಪ್ರತಿಭಟನೆ ಬಗ್ಗೆ ಸಿಎಂ ಬಿಎಸ್ವೈ ಹಾಗೂ ಲಕ್ಷ್ಮಣ ಸವದಿಯವರು ಗಂಭೀರವಾಗಿ ಪರಿಗಣಿಸುತ್ತಾರೆ. ಆದರೆ ನೌಕರರು ತಾಳ್ಮೆಯಿಂದ ವರ್ತಿಸಬೇಕು. ಇಂದು ನಿಮ್ಮ ಸಮಸ್ಯೆ ಏನೇ ಇರಲಿ, ಪ್ರತಿಭಟಿಸಲು ವಿರೋಧ ಮಾಡಲ್ಲ. ಸಾರ್ವಜನಿಕರಿಗೆ ತೊಂದರೆ ಆಗದಂತೆ ನಮ್ಮ ಪ್ರತಿಭಟನೆಗಳಿರಬೇಕು ಎಂದರು.