ದಾವಣಗೆರೆ :ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಸಿಹಿ-ಕಹಿ ಏನೇ ಬರಲಿ ಸ್ವೀಕರಿಸುತ್ತೇನೆ ಎಂದು ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಹೇಳಿದರು.
ನಗರದಲ್ಲಿ ನಡೆದ ಜನಸೇವಕ್ ಸಮಾವೇಶದ ಬಳಿಕ ಮಾತನಾಡಿದ ಅವರು, ನಿನ್ನೆ ದೆಹಲಿಯಲ್ಲಿ ವರಿಷ್ಠರೊಂದಿಗೆ ಸಿಎಂ ಮಾತುಕತೆ ನಡೆಸಿ ಬೆಂಗಳೂರಿಗೆ ಹಿಂದಿರುಗಿದ್ದಾರೆ. ಸಿಎಂಗೆ ಪರಮಾಧಿಕಾರ ಇದೆ. ಸಿಹಿ-ಕಹಿ ಎರಡನ್ನೂ ಸಮಾನವಾಗಿ ಸ್ವೀಕರಿಸುತ್ತೇವೆ.
ರಾಜಕಾರಣದಲ್ಲಿ ಯಾರೂ ಸನ್ಯಾಸಿಗಳಲ್ಲ. ಸಚಿವ ಸ್ಥಾನಕ್ಕೆ ಹೊಸದಾಗಿ ಅಪ್ಲಿಕೇಶನ್ ಹಾಕಬೇಕಾ, ಸಚಿವನಾಗಿ ಕೆಲಸ ಮಾಡಿದ ಅನುಭವ ಇದೆ. ಸಂಘಟನೆ ಅನುಭವ ಕೂಡ ಇದೆ. ಆದ್ದರಿಂದ ನಾನೂ ಆಕಾಂಕ್ಷಿ ಎಂದು ರೇಣುಕಾಚಾರ್ಯ ಹೇಳಿದರು.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರ ಸಿಎಂ ಬದಲಾವಣೆ ಆಗ್ತಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಿಎಂ ಬದಲಾವಣೆ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಕನಸು ಬಿದ್ದಿತ್ತಾ, ಅವರು ಯಾವಾಗಲು ಗಾಢನಿದ್ರೆಯಲ್ಲಿರುತ್ತಾರೆ.