ಕರ್ನಾಟಕ

karnataka

ETV Bharat / state

ನಿಶ್ಚಿತಾರ್ಥ ಕಾರ್ಯಕ್ರಮದ ಭೋಜನ ಸೇವಿಸಿ 50 ಕ್ಕೂ ಹೆಚ್ಚು ಮಂದಿ ಅಸ್ವಸ್ಥ - latest davanagere news

ನಿಶ್ಚಿತಾರ್ಥ ಕಾರ್ಯಕ್ರಮವೊಂದರಲ್ಲಿ ಭೋಜನ ಸೇವಿಸಿ 50ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ತಾಲೂಕಿನ ಬಟ್ಲಕಟ್ಟೆ ಗ್ರಾಮದಲ್ಲಿ ನಡೆದಿದ್ದು, ಅವರಲ್ಲಿ 20 ಜನರು ತೀವ್ರ ಅಸ್ವಸ್ಥರಾಗಿದ್ದಾರೆ.

ನಿಶ್ಚಿತಾರ್ಥ ಕಾರ್ಯಕ್ರಮದ ಭೋಜನ...ವಿಷಾಹಾರ ಸೇವನೆಯಿಂದ 50ಕ್ಕೂ ಹೆಚ್ಚು ಜನರು ಅಸ್ವಸ್ಥ

By

Published : Nov 2, 2019, 8:52 PM IST

ದಾವಣಗೆರೆ:ನಿಶ್ಚಿತಾರ್ಥ ಕಾರ್ಯಕ್ರಮವೊಂದರಲ್ಲಿ ಭೋಜನ ಸೇವಿಸಿ 50ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ತಾಲೂಕಿನ ಬಟ್ಲಕಟ್ಟೆ ಗ್ರಾಮದಲ್ಲಿ ನಡೆದಿದ್ದು, ಅವರಲ್ಲಿ 20 ಜನರು ತೀವ್ರ ಅಸ್ವಸ್ಥರಾಗಿದ್ದಾರೆ.

ನಿಶ್ಚಿತಾರ್ಥ ಕಾರ್ಯಕ್ರಮದ ಭೋಜನ ಸೇವಿಸಿ 50ಕ್ಕೂ ಹೆಚ್ಚು ಜನರು ಅಸ್ವಸ್ಥ

ನಿನ್ನೆ ಸಂಜೆ ನಿಂಗಪ್ಪ ನಾಯಕನಟ್ಟಿ ಎಂಬುವರ ಪುತ್ರಿಯ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ರಾತ್ರಿ ವೇಳೆ ಊಟ ಮಾಡಿದ್ದ 50ಕ್ಕೂ ಹೆಚ್ಚು ಜನರಿಗೆ ಆರೋಗ್ಯದಲ್ಲಿ ಏರುಪೇರಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡಿರುವ 20 ಜನರಿಗೆ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದವರಿಗೆ ಬಟ್ಲಕಟ್ಟೆ ಸಮೀಪದ ಹದಡಿ ಗ್ರಾಮದ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ವೇಳೆ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಘಟನೆಗೆ ಕಾರಣ ತಿಳಿದು ಬಂದಿಲ್ಲ.

ABOUT THE AUTHOR

...view details