ದಾವಣಗೆರೆ: ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆ ಬಾರದ ಕರೆ : ರೇಣುಕಾಚಾರ್ಯ ಅಸಮಾಧಾನ - Davangere news
ಸಂಪುಟ ವಿಸ್ತರಣೆ ಕುರಿತಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಯಾವುದೇ ದೂರವಾಣಿ ಕರೆ ಬಾರದ ಹಿನ್ನೆಲೆ ಅವರ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ ನ್ಯಾಮತಿ ತಾಲೂಕಿನ ಕೆಂಚಿಕೊಪ್ಪ ಗ್ರಾಮದಲ್ಲಿ ನಡೆದ 'ರೈತರೊಂದಿಗೆ ಒಂದು ದಿನ' ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಅವರು, ಸಂಪುಟ ವಿಸ್ತರಣೆಯಲ್ಲಿ ಸಾಮಾಜಿಕವಾಗಿ ಭೌಗೋಳಿಕವಾಗಿ ತೀರ್ಮಾನ ತೆಗೆದುಕೊಳ್ಳಬೇಕು. ಕೆಲವು ಜಿಲ್ಲೆಗಳಿಗೆ ಮಾತ್ರ ಸಿಎಂ ಸೀಮಿತವಾಗಬಾರದು. ದಾವಣಗೆರೆ ಜಿಲ್ಲೆಯಲ್ಲಿ ಆರು ಮಂದಿ ಶಾಸಕರಿದ್ದಾರೆ. ನಮಗೆ ಅನ್ಯಾಯವಾಗಿದೆ. ಮುಖ್ಯವಾಗಿ ಭೌಗೋಳಿಕ ವಿಚಾರದಲ್ಲಿ. ನಾನು ಸೂಕ್ತ ಕಾಲದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ.
ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯಗೆ ಸಿಎಂರಿಂದ ಫೋನ್ ಕರೆ ಬಾರದೆ ಇರುವುದಕ್ಕೆ ಬೇಸರಗೊಂಡ ಅವರು ಅಸಮಾಧಾನ ಹೊರ ಹಾಕಿದ್ದಾರೆ. ಫೋನ್ ಕರೆ ಬಾರದೆ ಇರುವುದರಿಂದ ಕಾರ್ಯಕ್ರಮದ ವೇದಿಕೆಯಲ್ಲಿ ಬೇಸರದಿಂದ ಕುಳಿತಿದ್ದ ರೇಣುಕಾಚಾರ್ಯ ಫೋನ್ನಲ್ಲಿ ಬ್ಯುಸಿಯಾಗಿದ್ದರು. ಕಾರ್ಯಕ್ರಮ ನಡೆಯುತ್ತಿರುವಾಗಲೇ ಬೇಸರದಿಂದ ಭಾಗಿಯಾದ ಅವರು ನಿರಂತರವಾಗಿ ದೂರವಾಣಿಯಲ್ಲಿ ಮಾತನಾಡುತ್ತಿರುವ ದೃಶ್ಯ ಕಂಡು ಬಂತು.