ಹಾವೇರಿ/ರಾಣೆಬೆನ್ನೂರು: ರಾಣೆಬೆನ್ನೂರು ನಗರದ ದೇವರಗುಡ್ಡ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ರೈಲ್ವೆ ಕೆಳ ಸೇತುವೆ ಕಾಮಗಾರಿಯನ್ನು ಸಂಸದ ಶಿವಕುಮಾರ ಉದಾಸಿ ಪರಿಶೀಲಿಸಿದರು. ಈ ಕಾಮಗಾರಿಯಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆ ಸಂಸದರು ಭೇಟಿ ನೀಡಿ ಜನರಿಂದ ಮಾಹಿತಿ ಪಡೆದುಕೊಂಡರು.
ದೇವರಗುಡ್ಡ ರೈಲ್ವೆ ಕೆಳಸೇತುವೆ ಕಾಮಗಾರಿ ವೀಕ್ಷಿಸಿದ ಸಂಸದ ಶಿವಕುಮಾರ್ ಉದಾಸಿ - ರಾಣೆಬೆನ್ನೂರಿನಲ್ಲಿ ಮಾತನಾಡಿದ ಸಂಸದ ಶಿವಕುಮಾರ ಉದಾಸಿ
ರಾಣೆಬೆನ್ನೂರು ನಗರದ ದೇವರಗುಡ್ಡ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ರೈಲ್ವೆ ಕೆಳ ಸೇತುವೆ ಕಾಮಗಾರಿಯನ್ನು ಸಂಸದ ಶಿವಕುಮಾರ ಉದಾಸಿ ಪರಿಶೀಲಿಸಿದರು.
ಈ ವೇಳೆ ಮಾತನಾಡಿದ ಸಂಸದರು, ಕೆಳಸೇತುವೆ ನಿರ್ಮಾಣ ರೈಲ್ವೆ ಇಲಾಖೆಯ ರೂಪುರೇಷೆಯಾಗಿದ್ದು, ನಿತ್ಯವು ಇಲ್ಲಿ ಸಂಚರಿಸುವ ವಾಹನ ಸವಾರರಿಗೆ ಹಾಗೂ ರೈತರಿಗೆ ಸಮಸ್ಯೆಯಾಗುತ್ತದೆ ಎಂಬುದು ತಿಳಿದು ಬಂದಿದೆ. ಮುಂದಿನ ದಿನಗಳಲ್ಲಿ ಸೇತುವೆಯನ್ನು ಮೇಲ್ಸೇತುವೆಯಾಗಿ ಪರಿವರ್ತಿಸಲು ರೈಲ್ವೆ ಸಚಿವರ ಹತ್ತಿರ ಮಾತನಾಡುತ್ತೇನೆ. ಈ ಮೂಲಕ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಭರವಸೆ ಕೊಟ್ಟರು.
ರೈಲ್ವೆ ಕೆಳಸೇತುವೆ ಕಾಮಗಾರಿ ವಿರೋಧಿಸಿ ನಾಳೆ ರೈಲು ತಡೆ ಹೋರಾಟ ಹಮ್ಮಿಕೊಳ್ಳಲಾಗಿತ್ತು. ಆದರೆ ಸಂಸದರ ಭರವಸೆ ಹಿನ್ನೆಲೆಯಲ್ಲಿ ಚಳುವಳಿ ಕೈಬಿಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ.
TAGGED:
ಸಂಸದ ಶಿವಕುಮಾರ್ ಉದಾಸಿ ಹೇಳಿಕೆ