ಕರ್ನಾಟಕ

karnataka

ETV Bharat / state

ಅನುದಾನ ಗಿಟ್ಟಿಸಿಕೊಳ್ಳುವಲ್ಲಿ ಅಸಮರ್ಥರಾದ ಎಂಪಿಗಳೇ ರಾಜೀನಾಮೆ ನೀಡಿ: ಪ್ರತಿಭಟನೆ - ಬಹುಜನ ಸಮಾಜ ಪಾರ್ಟಿ ದಾವಣಗೆರೆ

ಕರ್ನಾಟಕ ಪ್ರವಾಹ ಸಂತ್ರಸ್ತರಿಗೆ ಕೇಂದ್ರ ಸರ್ಕಾರದಿಂದ ಸರಿಯಾದ ನೆರವು ಕೊಡಿಸಲು ಅಸಮರ್ಥರಾದ ಎಂಪಿಗಳು ರಾಜೀನಾಮೆ ನೀಡಲಿ ಹಾಗೂ ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಬಹುಜನ ಸಮಾಜ ಪಾರ್ಟಿ ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿತು.

ಸರಿಯಾದ ಅನುದಾನ ಗಿಟ್ಟಿಸಿಕೊಳ್ಳುವಲ್ಲಿ ಅಸಮರ್ಥರಾದ ಎಂಪಿಗಳು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ

By

Published : Oct 7, 2019, 11:40 AM IST

Updated : Oct 7, 2019, 1:06 PM IST

ದಾವಣಗೆರೆ:ಕರ್ನಾಟಕ ಪ್ರವಾಹ ಸಂತ್ರಸ್ತರಿಗೆ ಕೇಂದ್ರ ಸರ್ಕಾರದಿಂದ ಸರಿಯಾದ ನೆರವು ಕೊಡಿಸಲು ಅಸಮರ್ಥರಾದ ಎಂಪಿಗಳು ರಾಜೀನಾಮೆ ನೀಡಲಿ ಹಾಗೂ ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಬಹುಜನ ಸಮಾಜ ಪಾರ್ಟಿ ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿತು.

ನಗರದ ಜಿಲ್ಲಾಧಿಕಾರಿ ಕಚೇರಿ‌ ಮುಂಭಾಗ ಪ್ರತಿಭಟನೆ ‌ನಡೆಸಿದ ಕಾರ್ಯಕರ್ತರು, ಕರ್ನಾಟಕದ ಪ್ರವಾಹ ಸಂತ್ರಸ್ತರು ನರಳುತ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಸಿಎಂ ಯಡಿಯೂರಪ್ಪ ನೆರೆಪೀಡಿತ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದರು. ಜೊತೆಗೆ ಕೇಂದ್ರದ ಅಧಿಕಾರಿಗಳ ತಂಡ ವರದಿ ಕೂಡ ನೀಡಿತ್ತು. ಆದರೆ, ಇದುವರೆಗೂ ಪ್ರವಾಹ ಪೀಡಿತರಿಗೆ ಪರಿಹಾರ ತಲುಪಿಸಲು ಮಾತ್ರ ಹೆಣಗಾಡುತ್ತಿದ್ದಾರೆ ಎಂದು ದೂರಿದರು.

ಕೇಂದ್ರ ಹಾಗೂ ರಾಜ್ಯ ಎರಡರಲ್ಲೂ ಬಿಜೆಪಿ ಸರ್ಕಾರವೇ ಆಡಳಿತ ನಡೆಸುತ್ತಿದೆ. ಬಿಜೆಪಿಗೆ ಅತಿಹೆಚ್ಚು ಶಾಸಕರು ಮತ್ತು ಸಂಸದರನ್ನು ನೀಡಿರುವ ಉತ್ತರ ಕರ್ನಾಟಕವನ್ನು ಬಿಜೆಪಿ ನಿರ್ಲಕ್ಷ್ಯ ಮಾಡಿ ಕೇವಲ ಬಿಡಿಗಾಸು‌ ನೀಡಿದೆ. ಈ ಹಿನ್ನಲೆ ಅಸಮರ್ಥ ಸಂಸದರು ರಾಜೀನಾಮೆ ನೀಡಲಿ ಹಾಗೂ ರಾಜ್ಯ ಸರ್ಕಾರ ಈ ಕೂಡಲೇ ವಜಾ ಆಗಲಿ ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳು ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

Last Updated : Oct 7, 2019, 1:06 PM IST

ABOUT THE AUTHOR

...view details