ದಾವಣಗೆರೆ: ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬನ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿರುವ ಘಟನೆ ದಾವಣಗೆರೆ ನಗರದ ಬಸವರಾಜ ಪೇಟೆಯಲ್ಲಿ ನಡೆದಿದೆ.
ದಾವಣಗೆರೆ: ರಿಯಲ್ ಎಸ್ಟೇಟ್ ಉದ್ಯಮಿ ಬರ್ಬರ ಹತ್ಯೆ
ದಾವಣಗೆರೆ ನಗರದ ಬಸವರಾಜ ಪೇಟೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.
ರಿಯಲ್ ಎಸ್ಟೇಟ್ ಉದ್ಯಮಿ
ಬಸವರಾಜ್ ಪೇಟೆಯ ಸೀಮೆಎಣ್ಣೆ ಪರಮೇಶ್( 45) ಕೊಲೆಯಾದ ವ್ಯಕ್ತಿ. ಇವರು ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದರು. ಆಟೋದಲ್ಲಿ ಬಂದ ನಾಲ್ವರು ಈ ಕೃತ್ಯ ಎಸಗಿ ಪರಾರಿಯಾಗಿದ್ದಾರೆ. ಪರಮೇಶ್ ಅವರನ್ನು ಅವರ ಮನೆ ಸಮೀಪವೇ ಕೊಲೆ ಮಾಡಲಾಗಿದ್ದು, ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿತ್ತು.
ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಗಾಂಧಿನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ರಿಷ್ಯಂತ್ ಭೇಟಿ ನೀಡಿ ಮಾಹಿತಿ ಪಡೆದರು.