ಕರ್ನಾಟಕ

karnataka

ಪೌರತ್ವ ತಿದ್ದುಪಡಿ ಕಾಯ್ದೆ, ಎನ್‌ಆರ್​ಸಿ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ..

By

Published : Dec 18, 2019, 8:40 PM IST

ಇಂದು ನಗರದಲ್ಲಿ ಶಾಸಕ ಅಬ್ದುಲ್ ಜಬ್ಬಾರ್ ಅವರ ನೇತೃತ್ವದಲ್ಲಿ ಮುಸ್ಲಿಂ ಸಮಾಜದ ಬಾಂಧವರು ಎನ್‌ಆರ್​ಸಿ ಮತ್ತು ಸಿಎಎಯನ್ನು ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಮುಸ್ಲಿಂ ಬಾಂಧವರ ಪ್ರತಿಭಟನೆ
Muslim community people protest

ದಾವಣಗೆರೆ:ಕೇಂದ್ರ ಸರ್ಕಾರಜಾರಿಗೊಳಿಸುತ್ತಿರುವ ಎನ್‌​ಆರ್​ಸಿ ಮತ್ತು ಸಿಎಎಯನ್ನು ಹಿಂಪಡೆಯುವಂತೆ ಆಗ್ರಹಿಸಿ ಮುಸ್ಲಿಂ ಸಮುದಾಯದ ಬಾಂಧವರು ಪ್ರತಿಭಟನೆ ನಡೆಸುವ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಎನ್ಆರ್​ಸಿ ಮತ್ತು ಸಿಎಎ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ..

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶಾಸಕ ಅಬ್ದುಲ್ ಜಬ್ಬಾರ್ ಅವರ ನೇತೃತ್ವದಲ್ಲಿ ಜಮಾಯಿಸಿದ ಮುಸ್ಲಿಂ ಸಮಾಜದ ಬಾಂಧವರು, ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಕಾಯ್ದೆ ತೀವ್ರ ವಿವಾದವನ್ನುಂಟು ಮಾಡಿದೆ. ದೇಶದಲ್ಲಿ ಅಶಾಂತಿ, ಅಭದ್ರತೆಯನ್ನು ಸೃಷ್ಠಿಸಿರುವ ಈ ಕಾಯ್ದೆ ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೋಮು ವಿಷಬೀಜ ಬಿತ್ತುವ ಮಾನವೀಯತೆಗೆ ವಿರುದ್ಧವಾಗಿರುವ ರಾಷ್ಟ್ರೀಯ ಪೌರತ್ವ ನೋಂದಣಿ ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಯವರಿಗೆ ಮನವಿ ಸಲ್ಲಿಸಿದರು.

TAGGED:

ABOUT THE AUTHOR

...view details