ದಾವಣಗೆರೆ:ಜಿಲ್ಲಾ ನ್ಯಾಯಾಲಯದಲ್ಲಿ ಜು.13ರಂದು ರಾಷ್ಟ್ರೀಯ ಬೃಹತ್ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಅದಾಲತ್ನಲ್ಲಿ ಸುಮಾರು 5 ರಿಂದ 6 ಸಾವಿರ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯಾರ್ಥ ಮಾಡುವ ಗುರಿ ಹೊಂದಲಾಗಿದೆ ಎಂದು ಪ್ರಧಾನ ಜಿಲ್ಲಾ ಸೆಷನ್ ನ್ಯಾಯಾಧೀಶರಾದ ಅಂಬಾದಾಸ್ ಜಿ. ಕುಲಕರ್ಣಿ ತಿಳಿಸಿದರು.
ಜು.13ಕ್ಕೆ ರಾಷ್ಟ್ರೀಯ ಬೃಹತ್ ಲೋಕ ಅದಾಲತ್ : ಅಂಬಾದಾಸ್ ಜಿ. ಕುಲಕರ್ಣಿ - undefined
ನ್ಯಾಯಾಲಯದಲ್ಲಿ ಯಾವುದೇ ಪ್ರಕರಣಗಳು ಇತ್ಯಾರ್ಥವಾಗಲು ಸಮಯ ಹಿಡಿಯುತ್ತದೆ. ಹೀಗಾಗಿ ಲೋಕ ಅದಾಲತ್ ಮೂಲಕ ಸಮಸ್ಯೆಗೆ ಮುಕ್ತಿ ನೀಡುವ ಉದ್ದೇಶದಿಂದ ಜುಲೈ.13ರಂದು ರಾಷ್ಟ್ರೀಯ ಬೃಹತ್ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಅದಾಲತ್ನಲ್ಲಿ ಸುಮಾರು 5 ರಿಂದ 6 ಸಾವಿರ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯಾರ್ಥ ಮಾಡುವ ಗುರಿ ಹೊಂದಲಾಗಿದೆ ಎಂದು ಪ್ರಧಾನ ಜಿಲ್ಲಾ ಸೆಷನ್ ನ್ಯಾಯಾಧೀಶರಾದ ಅಂಬಾದಾಸ್ ಜಿ. ಕುಲಕರ್ಣಿ ತಿಳಿಸಿದರು.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜು.13ರಂದು ರಾಷ್ಟ್ರೀಯ ಬೃಹತ್ ಲೋಕ ಅದಾಲತ್ ನಡೆಯಲಿದ್ದು, ಕಾನೂನಿನ ವ್ಯಾಪ್ತಿಯಲ್ಲಿ ರಾಜಿ ಸಂಧಾನದ ಮೂಲಕ ಇತ್ಯಾರ್ಥಗೊಳಿಸಿದರೆ ಹಣ ಹಾಗೂ ಸಮಯ ಉಳಿತಾಯದ ಜೊತೆಗೆ ಸಮಸ್ಯೆಗಳು ಬಗೆ ಹರಿಯುತ್ತವೆ. ನ್ಯಾಯಾಲಯದಲ್ಲಿ ಯಾವುದೇ ಪ್ರಕರಣಗಳು ಇತ್ಯಾರ್ಥವಾಗಲು ಸಮಯ ಹಿಡಿಯುತ್ತದೆ. ಹೀಗಾಗಿ ಲೋಕ ಅದಾಲತ್ ಮೂಲಕ ಸಮಸ್ಯೆಗೆ ಮುಕ್ತಿ ನೀಡುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿರುವ ನ್ಯಾಯಾಲಯಗಳಲ್ಲಿ ಸುಮಾರು 35 ಸಾವಿರ ಪ್ರಕರಣಗಳು ಬಾಕಿ ಇದ್ದು, ಇದರಲ್ಲಿ ಶೇ. 20% ರಷ್ಟು ಪ್ರಕರಣಗಳನ್ನಾದರೂ ಲೋಕ ಅದಾಲತ್ರನಲ್ಲಿ ಇತ್ಯಾರ್ಥ ಮಾಡಬೇಕು ಎಂಬ ಉದ್ದೇಶ ನಮ್ಮದು. ಜು.13 ಎರಡನೇ ಶನಿವಾರ ಆಗಿರುವುದರಿಂದ ನ್ಯಾಯಾಲಯದಲ್ಲಿ ಯಾವುದೇ ಕಲಾಪಗಳು ಇರುವುದಿಲ್ಲ. ಎಲ್ಲಾ ನ್ಯಾಯಾಧೀಶರುಗಳು ಲೋಕ ಅದಾಲತ್ನಲ್ಲಿ ಭಾಗವಹಿಸಲಿದ್ದು, ಇಲ್ಲಿ ಭಾಗವಹಿಸುವವರು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.